ಪುದು ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಚತೆಗೆ ಮೊದಲ ಅದ್ಯತೆ
ಎರಡನೇ ಬಾರಿಗೆ ಪುದು ಗ್ರಾ.ಪಂ. ಅಧ್ಯಕ್ಷರಾಗಿ ಮಂಗಳವಾರ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಕಳೆದ ಬಾರಿ ಅಧ್ಯಕ್ಷನಾಗಿ ಅಧಿಕಾರದಲ್ಲಿದ್ದ ವೇಳೆ ನಗರಸ್ಥಳೀಯಾಡಳಿತ ಸಂಸ್ಥೆಗಳ ಹೊರತು ಪಡಿಸಿದರೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಮೊದಲ ಬಾರಿಗೆ ಮನೆ ಮನೆ ಕಸ-ತ್ಯಾಜ್ಯ ಸಂಗ್ರಹಕ್ಕಾಗಿ ವಾಹನ ವ್ಯವಸ್ಥೆ ಕಲ್ಪಿಸಿದ ಕೀರ್ತಿ ಪುದು ಪಂಚಾಯತಿಗಿದೆ ಎಂದರು.
ಈ ಬಾರಿಯೂ ಕ್ಷೇತ್ರದ ಶಾಸಕರೂ, ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರ ಸಲಹೆ ಮೇರೆಗೆ, ಪಂಚಾಯತ್ ಅಧಿಕಾರಿ-ಸಿಬ್ಬಂದಿ ವರ್ಗ, ಸದಸ್ಯರುಗಳು ಹಾಗೂ ಗ್ರಾಮಸ್ಥರನ್ನು ವಿಶ್ವಾಸಕ್ಕೆ ಪಡೆದು ಗ್ರಾಮದ ಅಭಿವೃದ್ದಿಗೆ ಶ್ರಮಿಸಲಾಗುವುದು ಎಂದರು.
ಇದೇ ವೇಳೆ ನಿರ್ಗಮನ ಅಧ್ಯಕ್ಷೆ ರಶೀದಾ ಬಾನು ಹಾಗೂ ಉಪಾಧ್ಯಕ್ಷ ಇಕ್ಬಾಲ್ ಸಜೀರ್ ಅವರು ನೂತನ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಹಾಗೂ ಉಪಾಧ್ಯಕ್ಷೆ ರಕ್ಸಾನಾ ಬಾನು ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಪುದು ಪಂಚಾಯತಿನಲ್ಲಿ ಐದು ವರ್ಷಗಳ ಕಾಲ ಪಿಡಿಒ ಆಗಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಕೊಳ್ನಾಡು ಪಂಚಾಯತಿಗೆ ವರ್ಗಾವಣೆಗೊಂಡಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹರೀಶ್ ಕೆ.ಎ ಅವರನ್ನು ಗೌರವಿಸಿ ಬೀಳ್ಕೊಡಲಾಯಿತು. ನೂತನ ಪಿಡಿಒ ಆಗಿ ನೇಮಕಗೊಂಡಿರುವ ಡಾ ಸ್ಮೃತಿ ಅವರನ್ನು ಸ್ವಾಗತಿಸಲಾಯಿತು.
ಜಿ.ಪಂ ಮಾಜಿ ಸದಸ್ಯ ಉಮ್ಮರ್ ಫಾರೂಕ್ ಫರಂಗಿಪೇಟೆ, ಪುದು ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಕಾಶ್ಚಂದ್ರ ರೈ, ಮೇರಮಜಲು ಗ್ರಾ.ಪಂ. ಮಾಜಿ ಅಧ್ಯಕ್ಷೆ, ಹಾಲಿ ಸದಸ್ಯೆ ವೃಂದಾ ಪೂಜಾರಿ, ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜಾ, ಬಂಟ್ವಾಳ ತಾ.ಪಂ. ಮಾಜಿ ಸದಸ್ಯ ಆಸಿಫ್ ಇಕ್ಬಾಲ್, ಮುಡಿಪು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಶಮೀರ್ ಫಜೀರ್, ಅಮ್ಮೆಮಾರು ಮಸೀದಿ ಅಧ್ಯಕ್ಷ ಅಬೂಸಾಲಿಹ್ ಮುಸ್ಲಿಯಾರ್, ಮದ್ರಸ ಮ್ಯಾನೇಜ್ ಮೆಂಟ್ ಅಧ್ಯಕ್ಷ ಹಸನಬ್ಬ, ಪ್ರಮುಖರಾದ ಎಫ್ ಎ ಖಾದರ್, ಅಬ್ದುಲ್ ಖಾದರ್, ಸುಜೀರ್-ಬದಿಗುಡ್ಡೆ, ಅಬೂಬಕ್ಕರ್ ಖಾಝಿ ಮತ್ತಿತರರು ಉಪಸ್ಥಿತರಿದ್ದರು.
ಪಿಡಿಒ ಡಾ. ಸ್ಮೃತಿ ಸ್ವಾಗತಿಸಿ, ಅಬ್ದುಲ್ ಹಮೀದ್ ಗೋಳ್ತಮಜಲು ಕಾರ್ಯಕ್ರಮ ನಿರೂಪಿಸಿದರು. ಗ್ರಾಮಸ್ಥರ ಪರವಾಗಿ ಮನೋಜ್ ಆಚಾರ್ಯ ಹಾಗೂ ನಝೀರ್ ಕುಂಜತ್ಕಲ ಅವರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.