ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಆತ್ಮಹತ್ಯೆ
Tuesday, October 14, 2025
ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (40) ಅ.13ರ ರಾತ್ರಿ ಬಾರಕೂರು ಸಮೀಪ ರೈಲ್ವೇ ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೆಬ್ರಿಯಲ್ಲಿ ವೈನ್ ಶಾಪ್ ನಡೆಸುತ್ತಿದ್ದ ಅವರು, ಅಂತರ್ಮುಖಿಯಾಗಿದ್ದರು.
ಘಟನೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮೃತರು ತಾಯಿ, ಪತ್ನಿ ಮತ್ತು ಈರ್ವರು ಪುತ್ರರನ್ನು ಅಗಲಿದ್ದಾರೆ.