ಡಾ. ಕಿಶೋರ್ ಕುಮಾರ್ ಸಿ.ಕೆ. ನಿಧನ

ಡಾ. ಕಿಶೋರ್ ಕುಮಾರ್ ಸಿ.ಕೆ. ನಿಧನ


ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಕ ಶಿಕ್ಷಣ ವಿಭಾಗದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿದ್ದ ಡಾ. ಕಿಶೋರ್ ಕುಮಾರ್ ಸಿ.ಕೆ.(57) ರವಿವಾರ ಮುಂಜಾನೆ ನಿಧನರಾಗಿದ್ದಾರೆ.

ಇವರು ಕೆಲವು ದಿನಗಳಿಂದ ಅಸೌಖ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. 

ಅವರು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅನೇಕ ವರ್ಷಗಳಿಂದ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಕಿಶೋರ್ ಕುಮಾರ್, ವಿವಿಯ ಪ್ರಭಾರ ಕುಲಪತಿಯಾಗಿ, ಕುಲಸಚಿವರಾಗಿ ಕಾರ್ಯನಿರ್ವಹಿಸಿದ್ದರು. ದೈಹಿಕ ಶಿಕ್ಷಕ ಶಿಕ್ಷಣ ವಿಭಾಗದ ನಿರ್ದೇಶಕರಾಗಿ, ಅಧ್ಯಕ್ಷರಾಗಿದ್ದರು. 

ಮೃತರು ಪತ್ನಿ, ಇಬ್ಬರು ಪುತ್ರರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಮಂಗಳೂರು ವಿವಿ ಕುಲಪತಿ, ಕುಲಸಚಿವರು ಸಂತಾಪ ವ್ಯಕ್ತಪಡಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article