ಕೃಷಿಯಿಂದ ನಮ್ಮ ಒತ್ತಡ, ಕಷ್ಟಗೆ ಪರಿಹಾರ: ಮಂಜುನಾಥ ಭಂಡಾರಿ
ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಆವರಣದಲ್ಲಿ ನಡೆದ ಕೃಷಿ ಮೇಳದಲ್ಲಿ ಭಾನುವಾರ ನಡೆದ ವಿಚಾರಗೋಷ್ಟಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯದ ವಿಶ್ವವಿದ್ಯಾನಿಲಯಗಳು ಎಕರೆಗಟ್ಟಲೆ ಜಮೀನು ಹೊಂದಿವೆ. ಸರ್ಕಾರದ ಯಾವುದೇ ಅನುದಾನ ಪಡೆಯದೇ, ತಮ್ಮ ಜಮೀನಿನಲ್ಲಿಯೇ ಇಚ್ಛಾಶಕ್ತಿ ಬೆಳೆಸಿಕೊಂಡು ವಿವಿಧ ಬೆಳೆಗಳನ್ನು ಬೆಳೆಸಿ ಆರ್ಥಿಕ ಸ್ಥಿತಿ ಸದೃಢಗೊಳಿಸಿಕೊಂಡು ಸ್ವಾವಲಂಬಿಯಾಗಿ ವಿಶ್ವವಿದ್ಯಾನಿಲಯ ನಡೆಯುವಂತಾಗಬೇಕು. ಮಾದರಿ ವಿಶ್ವವಿದ್ಯಾನಿಲಯವಾಗಿ ಹೊರಹೊಮ್ಮಬೇಕು ಎಂದು ಸಲಹೆ ನೀಡಿದರು.
ನಂತರ ನಡೆದ ಗೇರು ಬೆಳೆ ಮತು ಕರಾವಳಿಗೆ ಭವಿಷ್ಯದ ಬೆಳೆಗಳು ಮತ್ತು ತಾಂತ್ರಿಕತೆಗಳು ವಿಚಾರಗೋಷ್ಟಿಯಲ್ಲಿ ಕಾರ್ಕಳ ಶಿರ್ಲಾಲಿನ ಪ್ರಗತಿಪರ ಕೃಷಿಕ ಗುಣಪಾಲ ಕಡಂಬ, ದ.ಕ. ಜಿಲ್ಲೆ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಡಿ. ಮಂಜುನಾಥ, ಕುದಿ ಗ್ರಾಮದ ಕುದಿ ಶ್ರೀನಿವಾಸ ಭಟ್, ಪ್ರಗತಿಪರ ಕೃಷಿಕ ಯಡ್ತಾಡಿ ಸತೀಶ ಶೆಟ್ಟಿ ಪಾಲ್ಗೊಂಡು ಮಾಹಿತಿ ನೀಡಿದರು.
ಡಿಪ್ಲೊಮಾ ಕೃಷಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಕೆ.ವಿ. ಸುಧೀರ್ ಕಾಮತ್ ಸ್ವಾಗತಿಸಿ, ಕೆ.ವಿ.ಕೆ.ಯ ಮುಖ್ಯಸ್ಥ ಡಾ. ಧನಂಜಯ ಬಿ. ವಂದಿಸಿದರು. ನಂತರ ವಿಚಾರಗೋಷ್ಟಿಗಳು ನಡೆದವು.