ಬೈಕ್ ಢಿಕ್ಕಿ: ಚಿರತೆ ಸಾವು
Wednesday, October 22, 2025
ಕುಂದಾಪುರ: ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ಗೆ ಹಠಾತ್ತಾಗಿ ಅಡ್ಡಬಂದ ಚಿರತೆಗೆ ಢಿಕ್ಕಿ ಹೊಡೆದ ಪರಿಣಾಮ ಚಿರತೆ ಸ್ಥಳದಲ್ಲೇ ಮೃತಪಟ್ಟಿದ್ದು ಸವಾರ ಆಸ್ಪತ್ರೆ ಸೇರಿದ ದುರ್ಘಟನೆ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂಚಾರು ಎಂಬಲ್ಲಿ ಸಂಭವಿಸಿದೆ.
ನಂಚಾರಿನ ಭಾಸ್ಕರ್ ಶೆಟ್ಟಿ ಎಂಬವರು ಸೋಮವಾರ ರಾತ್ರಿ ತನ್ನ ದ್ವಿಚಕ್ರ ವಾಹನದಲ್ಲಿ ಮನೆಗೆ ಬರುತ್ತಿದ್ದ ವೇಳೆ ಒಮ್ಮೆಲೇ ಚಿರತೆಯೊಂದು ಅಡ್ಡ ಬಂದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಚಿರತೆಗೆ ಢಿಕ್ಕಿ ಹೊಡೆದು ಬೈಕ್ ಪಲ್ಟಿಯಾಗಿದೆ.
ಢಿಕ್ಕಿಯ ರಭಸಕ್ಕೆ ಚಿರತೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದೆ.
ಬೈಕ್ ಸವಾರ ಬಿದ್ದು ಗಂಭೀರ ಗಾಯ ಗೊಂಡಿದ್ದಾರೆ. ಅವರನ್ನು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿರುತ್ತಾರೆ.
ಹೆಬ್ರಿ ಅರಣ್ಯಇಲಾಖೆಯವರು ಸ್ಥಳಕ್ಕಾಗಮಿಸಿ ಮೃತಪಟ್ಟ ಚಿರತೆಯನ್ನು ಪರಿಶೀಲಿಸಿದ್ದಾರೆ.
ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.