ಇಬ್ಬರು ಸರಗಳ್ಳರ ಬಂಧನ
Saturday, October 11, 2025
ಕುಂದಾಪುರ: ಬೈಕಿನಲ್ಲಿ ಬಂದು ಮಹಿಳೆಯ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದ ಪ್ರಕರಣವನ್ನು ಭೇದಿಸಿದ ಕುಂದಾಪುರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಸಂಜಯ್ ಎಲ್. ಮತ್ತು ವಸಂತ ಕುಮಾರ್ ಬಂಧಿತ ಆರೋಪಿಗಳು.
ಘಟನೆ ವಿವರ:
ಮೀನಾಕ್ಷಿ ಎಂಬವರು ತಮ್ಮ ಮಗಳು ಜ್ಯೋತಿಯೊಂದಿಗೆ ಕುಂದಾಪುರ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಿಂದ ಶಾಸ್ತ್ರಿ ಸರ್ಕಲ್ ಕಡೆಗೆ ನಡೆದುಕೊಂಡು ಬರುತ್ತಿದ್ದ ವೇಳೆ, ಇಬ್ಬರು ಮೋಟಾರ್ ಸೈಕಲ್ ಸವಾರರು ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.
ತನಿಖಾಧಿಕಾರಿ ಜಯರಾಮ ಡಿ. ಗೌಡರವರ ನೇತೃತ್ವದಲ್ಲಿ ತನಿಖೆ ನಡೆಸಿದ ಪೊಲೀಸರು ಆರೋಪಿಗಳಾದ ಸಂಜಯ್ ಎಲ್. ಮತ್ತು ವಸಂತ ಕುಮಾರ್ ಅವರನ್ನು ಕ್ರಮವಾಗಿ ಶಿವಮೊಗ್ಗ ಮತ್ತು ದಾವಣಗೆರೆಯಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ.
ಆರೋಪಿಗಳಿಂದ 3 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರ, ಸ್ಕಾರ್ಪಿಯೋ ಕಾರು ಮತ್ತು ಮೋಟಾರ್ ಸೈಕಲ್ ಸೇರಿ ಒಟ್ಟು 8 ಲಕ್ಷ 20 ಸಾವಿರ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.