ಕುಂದಾಪುರ: ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್ ನ 9ನೇ ತರಗತಿಯ ವಿದ್ಯಾರ್ಥಿನಿ ಮಹಾಲಕ್ಷ್ಮೀ ಉಡುಪಿ ಜಿಲ್ಲಾ ಮಟ್ಟದ ಐಟಿ ಕ್ವಿಜ್ ನಲ್ಲಿ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಅಧ್ಯಾಪಕ ವೃಂದದವರು ಮತ್ತು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯವರು ಆಕೆಗೆ ಶುಭ ಹಾರೈಸಿ ಅಭಿನಂದಿಸಿದ್ದಾರೆ.