12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tuesday, October 7, 2025
ಮಂಗಳೂರು: ಕಳೆದ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಬಂಧಿತ ಆರೋಪಿಯನ್ನು ಮಂಗಳೂರಿನ ಕಸಬ ಬೆಂಗ್ರೆಯ ನಿವಾಸಿ ಅಲ್ತಾಪ್ (47) ಎಂದು ಗುರುತಿಸಲಾಗಿದೆ.
ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಮಂಗಳೂರಿನ 2ನೇ ಸಿ.ಜೆ.ಎಂ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದವನನ್ನು ಅ.5 ರಂದು ಮಂಗಳೂರು ನಗರದ ಬಂದರು ಪರಿಸರದಲ್ಲಿ ಬಂಧಿಸಿ, ಮಂಗಳೂರಿನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಕಾರ್ಯಚರಣೆಯಲ್ಲಿ ಉತ್ತರ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಎಎಸ್‌ಐ ಬಾಬು ಮತ್ತು ಪಿಸಿಗಳಾದ ಗುರು ಬಿ.ಟಿ. ಹಾಗೂ ಸುನಿಲ್ ಕುಮಾರ್ ಎನ್. ಅವರೊಳಗೊಂಡ ತಂಡ ಭಾಗವಹಿಸಿದೆ.