ಅಬ್ದುಲ್ ರೆಹಮಾನ್ ಕೊಲೆ: 13 ಮಂದಿಯ ವಿರುದ್ಧ ಕೋಕಾ

ಅಬ್ದುಲ್ ರೆಹಮಾನ್ ಕೊಲೆ: 13 ಮಂದಿಯ ವಿರುದ್ಧ ಕೋಕಾ

ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 27ರಂದು ನಡೆದ ಅಬ್ದುಲ್ ರೆಹಮಾನ್ ಕೊಲೆ ಪ್ರಕರಣದ ಸಂಬಂಧ 13 ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ದೀಪಕ್, ಚಿಂತನ್, ಪೃಥ್ವಿರಾಜ್ ಜೋಗಿ, ಸುಮಿತ್ ಬಿ. ಆಚಾರ್ಯ, ವಿ.ರವಿರಾಜ ಮೂಲ್ಯ, ಅಭಿನ್ ರೈ, ತೇಜಾಕ್ಷ, ರವಿಸಂಜಯ್  ಜಿ.ಎಸ್., ಶಿವಪ್ರಸಾದ್ ತುಂಬೆ, ಪ್ರದೀಪ, ಶಾಹಿತ್ @ ಸಾಹಿತ್,  ಸಚಿನ್ ಯಾನೆ ಸಚ್ಚು ರೊಟ್ಟಿಗುಡ್ಡೆ, ರಂಜಿತ್ ಆರೋಪಿಗಳು. 

ಈ ಪ್ರಕರಣದ ಇನ್ನೊಬ್ಬ ಆರೋಪಿ ಭರತ್ ರಾಜ್ ಯಾನೆ ಭರತ್ ಕುಮ್ಡೇಲು (29, ಪುದು ಗ್ರಾಮ) ಮರೆಸಿಕೊಂಡಿದ್ದಾನೆ. ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು  ಹಲವು ವರ್ಷಗಳಿಂದ ಕೊಲೆ, ಕೊಲೆ ಯತ್ನ, ಪ್ರಚೋದನಕಾರಿ ಭಾಷಣಗಳು ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದು, ಸಮಾಜದಲ್ಲಿ ಅಶಾಂತಿ ಮತ್ತು ಕೋಮು ಸಂಘರ್ಷಕ್ಕೆ ಕಾರಣರಾಗಿದ್ದಾರೆ. ಹೀಗಾಗಿ, ಅವರ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ-2000 (THE KARNATAKA CONTROL OF ORGANISED CRIME ACT- 2000) ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಎಂದು ಪೊಲೀಸರು ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article