ಅ.13 ರಂದು ಎಸ್‌ಸಿಡಿಸಿಸಿ ಬ್ಯಾಂಕ್ ಗುತ್ತಿಗಾರು ಶಾಖೆಯ ಸ್ಥಳಾಂತರ, ಎ.ಟಿ.ಎಂ. ಕೇಂದ್ರ ಉದ್ಘಾಟನೆ
ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಸಮರ್ಥ ಅಧ್ಯಕ್ಷತೆಯಲ್ಲಿ ಸರ್ವಾಂಗೀಣ ಅಭಿವೃದ್ಧಿಯತ್ತ ಸಾಗುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಗ್ರಾಹಕರ ಅವಶ್ಯಕತೆಗೆ ಸದಾ ಸ್ಪಂದಿಸುತ್ತಿದೆ. ಇದೀಗ ಗ್ರಾಹಕರ ಹೆಚ್ಚಿನ ಅನುಕೂಲತೆಗಾಗಿ ಸುಳ್ಯ ತಾಲೂಕಿನಲ್ಲಿರುವ ಬ್ಯಾಂಕಿನ ಗುತ್ತಿಗಾರು ಶಾಖೆಯನ್ನು ಈಗ ಇರುವ ಕಟ್ಟಡದಿಂದ ಗುತ್ತಿಗಾರು ಮುಖ್ಯರಸ್ತೆಯಲ್ಲಿರುವ ‘ರಾಘವೇಂದ್ರ ಕಾಂಪ್ಲೆಕ್ಸ್’ನ ಪ್ರಥಮ ಅಂತಸ್ತಿಗೆ ಸ್ಥಳಾಂತರಿಸಲಾಗುವುದು. ಈ ಸ್ಥಳಾಂತರ ಸಮಾರಂಭ ಹಾಗೂ ಹೊಸ ಎ.ಟಿ.ಎಂ. ಕೇಂದ್ರದ ಉದ್ಘಾಟನೆ ಅ.13 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ.
ಸ್ಥಳಾಂತರಗೊಳ್ಳುವ ಈ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಬ್ಯಾಂಕಿನ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಬೆಂಗಳೂರು. ಇದರ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ದೀಪ ಪ್ರಜ್ವಲನೆ ಮಾಡಲಿರುವರು.
16ನೇ ಎ.ಟಿ.ಎಂ. ಕೇಂದ್ರದ ಉದ್ಘಾಟನೆ:
ಸದಾ ಗ್ರಾಹಕ ಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿರುವ ಈ ಬ್ಯಾಂಕಿನಲ್ಲಿ ಈಗಾಗಲೇ 15 ಎ.ಟಿ.ಎಂ.ಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಗುತ್ತಿಗಾರು ಶಾಖೆಯಲ್ಲಿ ಉದ್ಘಾಟನೆಗೊಳ್ಳಲಿರುವ 16ನೇ ಎ.ಟಿ.ಎಂ. ಕೇಂದ್ರದ ಉದ್ಘಾಟನೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ನೆರವೇರಿಸಲಿರುವರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮಿತ್ರ ಮೂಕಮಲೆ, ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಯಪ್ರಕಾಶ್ ಮೊಗ್ರ, ಗುತ್ತಿಗಾರು ಮಾಜಿ ಮಂಡಲ ಪ್ರಧಾನರಾದ ಮುಳಿಯ ತಿಮ್ಮಪ್ಪಯ್ಯ, ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಕಟ್ಟಡ ಮಾಲಕ ಅನಿಲ್ ಕುಮಾರ್ ಅವರು ಭಾಗವಹಿಸಲಿರುವರು.
ಗ್ರಾಹಕರಿಗೆ ಉನ್ನತ ಸೇವೆಯನ್ನು ನೀಡುವುದರೊಂದಿಗೆ ಜನಮನ್ನಣೆ ಪಡೆದಿರುವ ಈ ಶಾಖೆಯನ್ನು ಗ್ರಾಹಕರ ಅನುಕೂಲಕ್ಕಾಗಿ ಈ ಶಾಖೆಯು ಸಂಪೂರ್ಣ ಗಣಕೀಕೃತಗೊಂಡು, ಏಕಗವಾಕ್ಷಿ. ಕೋರ್ ಬ್ಯಾಂಕಿಂಗ್ ಹಾಗೂ ಆರ್‌ಟಿಜಿಎಸ್ ಮತ್ತು ನೆಪ್ಟ್ ಸೌಲಭ್ಯಗಳೊಂದಿಗೆ ಕಾರ್ಯಾರಂಭಗೊಳ್ಳಲಿದೆ ಎಂದು ಬ್ಯಾಂಕಿನ ಪ್ರಕಟಣೆ ತಿಳಿಸಿದೆ.