2014ರ ವರೆಗೆ ದೇಶದಲ್ಲಿ 53‌ ಲಕ್ಷ ಕೋಟಿ ಇದ್ದ ಸಾಲ ಈಗ 185 ಲಕ್ಷ ಕೋಟಿಗೆ ಏರಿದೆ: ಸಂತೋಷ್ ಲಾಡ್

2014ರ ವರೆಗೆ ದೇಶದಲ್ಲಿ 53‌ ಲಕ್ಷ ಕೋಟಿ ಇದ್ದ ಸಾಲ ಈಗ 185 ಲಕ್ಷ ಕೋಟಿಗೆ ಏರಿದೆ: ಸಂತೋಷ್ ಲಾಡ್


ಮಂಗಳೂರು: 2014ರ ವರೆಗೆ ದೇಶದ ಸಾಲ 53 ಲಕ್ಷ ಕೋಟಿ ಇತ್ತು. ನರೇಂದ್ರ ಮೋದಿ ಪ್ರಧಾನಿ ಆದ 10 ವರ್ಷಗಳಲ್ಲಿ ದೇಶದ ಸಾಲ 185 ಲಕ್ಷ ಕೋಟಿಗೆ ಏರಿಕೆಯಾಗಿದೆ. ದೇಶವನ್ನು ದಿವಾಳಿ ಮಾಡಿದ್ದು ಮೋದಿ ಅವರ ಸರ್ಕಾರವೇ ಹೊರತು‌ ನಾವಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದ್ದಾರೆ.


ಶುಕ್ರವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಿ ಬಳಿಕ ಅವರು ಮಾತನಾಡುತ್ತಿದ್ದರು. 


ಬಿಜೆಪಿಗರು ಚುನಾವಣೆ ಸಂದರ್ಭ ಅಭಿವೃದ್ಧಿ ಬಗ್ಗೆ ಮಾತನಾಡುವುದಿಲ್ಲ, ಬದಲಾಗಿ ಪಾಕಿಸ್ತಾನ, ಮುಸಲ್ಮಾನ, ಅಪಘಾನಿಸ್ತಾನ ಬಗ್ಗೆ ಮಾತ್ರ ಮಾತನಾಡುತ್ತಾರೆ. ರಾಹುಲ್ ಗಾಂಧಿ ಇದುವರೆಗೆ ಸಾವಿರಕ್ಕೂ ಅಧಿಕ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಹೊರ ದೇಶಗಳಿಗೆ ಭೇಟಿ ನೀಡಿದ ಬಳಿಕ ಸಾಮಾನ್ಯವಾಗಿ ಪ್ರಾಧನಿಯಾದವರೂ ಪತ್ರಿಕಾಗೋಷ್ಠಿ ನಡೆಸುತ್ತಾರೆ. ಆದರೆ ಪ್ರಧಾನಿ ಮೋದಿ ಅವರು ತಿಂಗಳಿಗೆ ಒಂದು ಸುದ್ದಿಗೋಷ್ಠಿಯನ್ನೂ ನಡೆಸಿಲ್ಲ. ಬಿಹಾರ ಚುನಾವಣೆಗಾಗಿ ಬಿಜೆಪಿ ಸರಕಾರ ಒಂದು ವರ್ಷದ ಆಡಳಿತದ ಹಣವನ್ನು ಮಹಿಳೆಯರ ಖಾತೆಗೆ ಹತ್ತು ಸಾವಿರ ಹಾಕಲಾಗುತ್ತಿದೆ ಎಂದು ಹೇಳಿದರು. 


ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕಾದರೆ ಬಸವಣ್ಣ, ಬುದ್ಧ, ಅಂಬೇಡ್ಕರ್, ಕಾಂಗ್ರೆಸ್ ಸಿದ್ಧಾಂತವುಳ್ಳ ಯುವಕರನ್ನು ಗುರುತಿಸಬೇಕು. ಕಟ್ಟೆ ಮೇಲೆ ನಿಂತು ಭಾಷಣ ಮಾತನಾಡುವ ಯುವಕರನ್ನು ಮುನ್ನೆಲೆಗೆ ತರಬೇಕು ಎಂದರು.

ಅಸಂಘಟಿತ ವರ್ಗದ ಕಾರ್ಮಿಕರಲ್ಲಿ ಖಾಸಗಿ ವಾಣಿಜ್ಯ ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರು ಸುಮಾರು 40 ಲಕ್ಷ ಇರುವುದಾಗಿ ಅಂದಾಜಿಸಲಾಗಿದ್ದು, ಅವರಿಗೆ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಅಧಿನಿಯಮ ಜಾರಿಗೆ ತರಲಾಗಿದೆ. ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯನ್ನು ರಚಿಸಿದ್ದು, ಈ ಮಂಡಳಿಯ ಮೂಲಕ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸುರೇಶ್ ಬಳ್ಳಾಲ್, ಪದ್ಮರಾಜ್ ಪೂಜಾರಿ, ಸದಾಶಿವ್ ಉಳ್ಳಾಲ್, ಟಿ.ಎಂ ಶಹೀದ್, ಎಂ.ಎ ಗಫೂರ್, ಲಾವಣ್ಯ ಬಳ್ಳಾಲ್, ಮಮತಾ ಗಟ್ಟಿ, ಅನೀಲ್ ತಡ್ಕಲ್, ಸೇರಿಂದತೆ ಮುಖಂಡರು, ಬ್ಲಾಕ್ ಅಧ್ಯಕ್ಷರು ಉಪಸ್ಥಿತರಿದ್ದರು. ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ಸ್ವಾಗತಿಸಿದರು. ಮಾಜಿ ಮೇಯರ್ ಶಶಿಧರ್ ಹೆಗ್ಡೆ ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article