ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ (ಎಂ.ಎಫ್.ಸಿ) ತಂಡದ ಮುಡಿಗೇರಿದ ಕುಡ್ಲದ ಪಿಲಿಪರ್ಬ-2025ರ ಕಿರೀಟ
ಶಿಸ್ತಿನ ತಂಡವಾಗಿ ಟೀಮ್ ಪರಶುರಾಮ್ ಹೊರ ಹೊಮ್ಮಿದರೆ, ಬಣ್ಣಗಾರಿಕೆ ಹಾಗೂ ತಾಸೆ ಹಿಮ್ಮೇಳ ವಿಭಾಗದಲ್ಲಿ ಪುರಲ್ದಪ್ಪೆನ ಮೋಕೆದ ಜೋಕುಲು ಪೊಳಲಿ ಟೈಗರ್ಸ್, ಹಾಗೂ ಮೆರವಣಿಗೆ ವಿಭಾಗದಲ್ಲಿ ಶಿವಶಕ್ತಿ ಟೈಗರ್ಸ್ ಕುಂಜತ್ತೂರು ಮಂಜೇಶ್ವರ, ಮುಡಿ ವಿಭಾಗದಲ್ಲಿ ನಂದಿಗುಡ್ಡ ಫ್ರೆಂಡ್ಸ್ ಬಾಬುಗುಡ್ಡ ಪ್ರಶಸ್ತಿ ಪಡೆದುಕೊಂಡರೆ, ಧರಣಿ ಮಂಡಲ ಪ್ರಶಸ್ತಿಯನ್ನು ಲೆಜೆಂಡ್ಸ್ ಟೈಗರ್ಸ್ ಕುಡ್ಲ ಬಾಚಿಕೊಂಡಿತು.
ಕೊನೆಯದಾಗಿ ಭಾಗವಹಿಸಿದ ಎಲ್ಲಾ ತಂಡಗಳಿಗೂ ಪ್ರೋತ್ಸಾಹ ಧನ ನೀಡಿ ಗೌರವಿಸುವ ಮೂಲಕ ಐದನೇ ಆವೃತ್ತಿಯ ಪಿಲಿಪರ್ಬಕ್ಕೆ ತೆರೆ ಬಿದ್ದಿತು.
ಸು ಫ್ರಮ್ ಸೋ ಖ್ಯಾತಿಯ ಜೆ.ಪಿ ತುಮಿನಾಡು, ಚಿತ್ರನಟ ರೂಪೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ಬ್ರಿಜೇಶ್ ಚೌಟ, ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್, ವಿ.ಕೆ ಫರ್ನಿಚರ್ಸ್ ನ ವಿಠ್ಠಲ್ ಕುಲಾಲ್, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಶ್ರೀ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ಶ್ರೀ ದಿವಾಕರ್ ಪಾಂಡೇಶ್ವರ, ಪ್ರಮುಖರಾದ ಶ್ರೀ ನರೇಶ್ ಶೆಣೈ, ಅಶ್ವಿತ್ ಕೊಟ್ಟಾರಿ, ಲಲಿತ್ ಮೆಂಡನ್, ಕಿರಣ್ ಶೆಣೈ, ಚೇತನ್ ಕಾಮತ್, ಸಹಾನ್, ಜಗದೀಶ್ ಕದ್ರಿ, ವಿಖ್ಯಾತ್ ಶೆಟ್ಟಿ, ಅನಿಲ್ ಬೋಳೂರು, ಸಂಜಯ್ ಪೈ, ನರೇಶ್ ಪ್ರಭು ಹಾಗೂ ಬಿಜೆಪಿ ನಿಕಟ ಪೂರ್ವ ಪಾಲಿಕೆ ಸದಸ್ಯರುಗಳ ಸಹಿತ ಅನೇಕ ಪ್ರಮುಖರು ಉಪಸ್ಥಿತರಿದ್ದರು.

