72ನೇ ಅಖಿಲ ಭಾರತ ಸಹಕಾರ ಸಪ್ತಾಹ 2025: ಮಂಗಳೂರಿನಲ್ಲಿ 16ರಂದು ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ

72ನೇ ಅಖಿಲ ಭಾರತ ಸಹಕಾರ ಸಪ್ತಾಹ 2025: ಮಂಗಳೂರಿನಲ್ಲಿ 16ರಂದು ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ


ಮಂಗಳೂರು: 72ನೇ ಅಖಿಲ ಭಾರತ ಸಹಕಾರ ಸಪ್ತಾಹ  ‘ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು’ ಎಂಬ ಧ್ಯೇಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ರಾಜ್ಯಮಟ್ಟದ ಏಳು ದಿನದ ಕಾರ್ಯಕ್ರಮಗಳು ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆಯಲಿದ್ದು, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನ.16ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದೆ.

ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ) ಕಚೇರಿಯಲ್ಲಿ ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್, ‘ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ’ ಎಂಬ ವಿಷಯದೊಂದಿಗೆ ನ. 16ರಂದು ಪೂರ್ವಾಹ್ನ 10ಕ್ಕೆ ಕರಾವಳಿ ಉತ್ಸವ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು,  15 ಸಾವಿರ ಮಂದಿ ಪಾಲ್ಗೊಳ್ಳುವರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ., ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು, ನವೋದಯ ಗ್ರ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ರಿ., ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು, ಎಲ್ಲಾ ವಿಧದ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆಯ ಸಹಯೋಗದೊಂದಿಗೆ ಈ ರಾಜ್ಯಮಟ್ಟದ ಕಾರ್ಯಕ್ರಮ ನಡೆಯಲಿದೆ ಎಂದರು.

‘ಸಹಕಾರ ಮಾಣಿಕ್ಯ ಪ್ರಶಸ್ತಿ’..

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸುವ ಉದ್ದೇಶದಿಂದ 2024ನೇ ಸಾಲಿನಿಂದ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಸಮಾರಂಭದಲ್ಲಿ ‘ಸಹಕಾರ ಮಾಣಿಕ್ಯ ಪ್ರಶಸ್ತಿ’ ಯನ್ನು ನೀಡಲು ನಿರ್ಧರಿಸಲಾಗಿದ್ದು, ಈ ಬಾರಿಯೂ 2025ರಲ್ಲಿ ಸರ್ವಾಂಗೀಣ ಪ್ರಗತಿಯನ್ನು ಸಾಧಿಸಿ ಆಯ್ಕೆಗೊಂಡ ಸಹಕಾರಿ ಸಂಘಗಳಿಗೆ ‘ಸಹಕಾರ ಮಾಣಿಕ್ಯ ಪ್ರಶಸ್ತಿ’ಯ ಜೊತೆಗೆ 5 ಗ್ರಾಂ ಚಿನ್ನದ ಪದಕ, ರೂ.10,000 ನಗದು ಹಾಗೂ ಪಾರಿತೋಷಕವನ್ನು ನೀಡಿ ಗೌರವಿಸಲಾಗುವುದು.

ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ: 

ರಾಜ್ಯಮಟ್ಟದ ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಕೃಷಿ ಪತ್ತಿನ ಸಹಕಾರಿ ಸಂಘಗಳು, ಮಹಿಳಾ ಸಹಕಾರಿ ಸಂಘಗಳು, ಮೀನುಗಾರಿಕಾ ಸಹಕಾರಿ ಸಂಘಗಳು, ಕ್ರೆಡಿಟ್ ಸೊಸೈಟಿಗಳು, ಸೌಹಾರ್ದ ಸಹಕಾರಿ ಸಂಘಗಳಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು.

ಉತ್ತಮ ಸ್ವ-ಸಹಾಯ ಸಂಘಗಳಿಗೆ ಪುರಸ್ಕಾರ: 

ಸಹಕಾರ ರಂಗದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ನವೋದಯ ಸ್ವ-ಸಹಾಯ ಗುಂಪುಗಳು ಬಡಜನರ ಆರ್ಥಿಕ ಶಕ್ತಿಯಾಗಿ ಕೆಲಸ ಮಾಡುತ್ತಿವೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 35,000 ಕ್ಕೂ ಅಧಿಕ ನವೋದಯ ಸ್ವ-ಸಹಾಯ ಗುಂಪುಗಳಿದ್ದು, ಸಹಕಾರ ಸಪ್ತಾಹದ ಆಚರಣೆಯ ಸಂದರ್ಭದಲ್ಲಿ ಅತ್ಯುತ್ತಮ ಸ್ವ-ಸಹಾಯ ಗುಂಪುಗಳನ್ನು ಪುರಸ್ಕರಿಸಲಾಗುವುದು ಎಂದರು.

ಗಣ್ಯರಿಂದ ಉದ್ಘಾಟನೆ..

ರಾಜ್ಯ ಮಟ್ಟದ ಸಹಕಾರ ಸಪ್ತಾಹ ಆಚರಣೆಯ ಸಮಾರಂಭವನ್ನು ಸ್ಪೀಕರ್ ಯು. ಟಿ. ಖಾದರ್ ಫರೀದ್ ಇವರು ಉದ್ಘಾಟಿಸಲಿರುವರು. ‘ಸಹಕಾರ ಮಾಣಿಕ್ಯ ಪ್ರಶಸ್ತಿ ಪ್ರದಾನ’ವನ್ನು ಸಚಿವ  ದಿನೇಶ್ ಗುಂಡೂರಾವ್ ಹಾಗೂ ‘ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ’ವನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೆರವೇರಿಸುವರು.

‘ಉತ್ತಮ ಸ್ವ-ಸಹಾಯ ಸಂಘ”ಗಳಿಗೆ ಪುರಸ್ಕಾರವನ್ನು ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ಅಧ್ಯಕ್ಷ ಜಿ.ಟಿ. ದೇವೇಗೌಡ ಪ್ರದಾನಿಸುವರು. ವಸ್ತುಪ್ರದರ್ಶನ ಮಳಿಗೆಗನ್ನು ಮಾಜಿ ಸಹಕಾರ ಸಚಿವ ಕೆ. ಎನ್. ರಾಜಣ್ಣ ಉದ್ಘಾಟಿಸುವು. ಸಹಕಾರ ಸಪ್ತಾಹದ ಧ್ವಜರೋಹಣವನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟ ನೆರವೇರಿಸುವರು.

ಉದ್ಘಾಟನೆಯನ್ನು ಮಾನ್ಯ ಶಾಸಕರು ಹಾಗೂ ಕರ್ನಾಟಕ ಸರಕಾರದ ಮಾಜಿ ಸಹಕಾರ ಸಚಿವರಾದ ಶ್ರೀ ಕೆ. ಎನ್. ರಾಜಣ್ಣರವರು ನೆರವೇರಿಸಲಿದ್ದಾರೆ. 

ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್‌ರವರು ವಹಿಸುವರು.

ಸಹಕಾರ ಸಂಘಗಳ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ, ಸಹಕಾರ ಸಂಘಗಳ ಉಪ ನಿಬಂಧಕ ರಮೇಶ್ ಎಚ್.ಎನ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ, ಉಭಯ ಜಿಲ್ಲೆಗಳ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೋಟ್ಟು, ಜಯಕರ ಶೆಟ್ಟಿ ಇಂದ್ರಾಳಿ,  ಬ್ಯಾಂಕಿನ ಉಪಾಧ್ಯಕ್ಷರಾದ ವಿನಯಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಭಾಸ್ಕರ್ ಎಸ್ ಕೋಟ್ಯಾನ್, ವಾದಿರಾಜ ಶೆಟ್ಟಿ, ಐಕಳಬಾವ ದೇವಿಪ್ರಸಾದ್ ಶೆಟ್ಟಿ ಎಸ್.ಬಿ. ಜಯರಾಮ್ ರೈ, ಜೈರಾಜ್ ಬಿ. ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಎಂ.ಮಹೇಶ್ ಹಗ್ಡೆ, ಅಶೋಕ್ ಕುಮಾರ್ ಶೆಟ್ಟಿ, ಸದಾಶಿವ ಉಳ್ಳಾಲ್, ರಾಜೇಶ್ ರಾವ್ , ಕುಶಲಪ್ಪ ಗೌಡ, ಎಸ್.ಎನ್. ಮನ್ಮಥ, ಸ್ಕ್ಯಾಡ್ಸ್ ಅಧ್ಯಕ್ಷರಾದ ರವೀಂದ್ರ ಕಂಬಳಿ, ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article