9 ಪ್ರಕರಣಗಳ ವಂಚಕಿಯ ಬಂಧನ

9 ಪ್ರಕರಣಗಳ ವಂಚಕಿಯ ಬಂಧನ


ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ದಾಖಲಾಗಿರುವ 9 ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಂಚಕಿಯನ್ನು ಮಂಗಳೂರು ಬರ್ಕೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಮಹಿಳೆಯನ್ನು ಮಂಗಳೂರಿನ ಕುಪ್ಪೆಪದವಿನ ಮುತ್ತೂರು ಗ್ರಾಮದ ನಿವಾಸಿ ಫರಿಧಾ ಬೇಗಂ ಯಾನೆ ಫರಿದಾ ಎಂದು ಗುರುತಿಸಲಾಗಿದೆ.

ಪ್ರಕರಣದ ವಿವರಣೆ:

ಬರ್ಕೆ ಪೊಲೀಸ್ ಠಾಣೆಯಲ್ಲಿ ಜಯರಾಯ ಎಂಬುವವರು ಮಂಗಳೂರು ನಗರದ ಎಂಪಾಯರ್ ಮಾಲ್‌ನಲ್ಲಿ ಲ್ಯಾಪ್ ಟಾಪ್ ಬಜಾರ್ ಎಂಬ ಸ್ಟೋರ್ ಇಟ್ಟುಕೊಂಡು ಎಲ್ಲಾ ಕಂಪನಿಗಳ ಲ್ಯಾಪ್ ಟಾಪ್‌ಗಳನ್ನು ಸೇಲ್ಸ್ ಮತ್ತು ಸರ್ವೀಸ್ ಮಾಡಿಕೊಂದ್ದು, ಈ ಶಾಪ್‌ನಿಂದ ಒಂದು ಆಪಲ್ ಕಂಪನಿಯ Macbook pro A2141 ಲ್ಯಾಪ್ ಟಾಪ್ ಒಂದು ಡೆಲ್ ಕಂಪನಿಯ Dell 5440/Core i5-13/16GB ಲ್ಯಾಪ್ ಟಾಪ್ ಮತ್ತು ಒಂದು ಆಪಲ್ ಕಂಪನಿಯ Macbook pro 2442 2021 M1 PRO ಲ್ಯಾಪ್ ಟಾಪ್ ಅನ್ನು ಆರೋಪಿ ಫರಿಧಾ ಬೇಗಂ ತನ್ನ ಪರಿಚಯದ ವ್ಯಕ್ತಿಯ ಮೂಲಕ ಮಾನ್ಯತೆ ಇಲ್ಲದ ಚೆಕ್‌ಗಳನ್ನು ನೀಡಿ ಲ್ಯಾಪ್ ಟಾಪ್‌ಗಳನ್ನು ಖರೀದಿಸಿ, ದೂರುದಾರರಿಗೆ ಒಟ್ಟು 1,98,000 ರೂ. ಹಣವನ್ನು ಪಾವತಿಸದೇ ಮೋಸ ಮಾಡಿದ ಫರೀದಾ ಬೇಗಂನನ್ನು ಬರ್ಕೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮೋಹನ ಕೊಟ್ಟಾರಿ ಅವರ ನೇತೃತ್ವದಲ್ಲಿ ಪ್ರಕರಣದ ತನಿಖಾಧಿಕಾರಿ ವಿನಾಯಕ ತೊರಗಲ್ ಮತ್ತು ಮಹಿಳಾ ಸಿಬ್ಬಂದಿಗಳು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ.3 ರ ತನಕ ನ್ಯಾಯಾಂಗ ಬಂಧನ ವಿಧಿಸಿದೆ. 

ಆರೋಪಿಯು ಪ್ರತಿಷ್ಠಿತ ಚಿನ್ನಾಭರಣಗಳ ಹಾಗೂ ಎಲೆಕ್ಟ್ರಾನಿಕ್ ಅಂಗಡಿಗಳಿಗೆ ಭೇಟಿ ಅಂಗಡಿ ಮಾಲಕರನ್ನು ನಂಬಿಸಿ, ವಿವಿಧ ಬ್ಯಾಂಕ್‌ಗಳ ಮಾನ್ಯತೆ ಇಲ್ಲದ ಚೆಕ್‌ಗಳನ್ನು ನೀಡಿ ಬೆಲೆಬಾಳುವ ಸೊತ್ತುಗಳನ್ನು ಖರೀದಿಸಿ ಮೋಸಗೊಳಿಸಿರುವ ಬಗ್ಗೆ ಆರೋಪಿತಳ ಮೇಲೆ ಬರ್ಕೆ ಪೊಲೀಸ್ ಠಾಣೆಯಲ್ಲಿ, ಮಂಗಳೂರು ನಗರದ ಕಾವೂರು ಪೊಲೀಸ್ ಠಾಣೆ, ಬಜಪೆ ಪೊಲೀಸ್ ಠಾಣೆ, ಮೂಡಬಿದ್ರೆ ಪೊಲೀಸ್ ಠಾಣೆ, ಮುಲ್ಕಿ ಪೊಲೀಸ್ ಠಾಣೆಯಲ್ಲಿ ತಲಾ ಒಂದೊಂದು ಮೋಸ, ವಂಚನೆಯ ಪ್ರಕರಣಗಳು ಮತ್ತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ೩ ಪ್ರಕರಣಗಳು ಹಾಗೂ ಉಡುಪಿ ಜಿಲ್ಲೆಯ ಶಿರ್ವ ಪೊಲೀಸ್ ಠಾಣೆಯಲ್ಲಿ ಒಂದು ಮೋಸ ವಂಚನೆಯ ಪ್ರಕರಣವು  ದಾಖಲಾಗಿದೆ.

ಆರೋಪಿತಳು ಮುಲ್ಕಿ ಪೊಲೀಸ್ ಠಾಣೆಯ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ನ್ಯಾಯಾಲಯಕ್ಕೆ ಪ್ರಕರಣದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ನ್ಯಾಯಾಲಯವು ಆರೋಪಿತಳ ವಿರುದ್ಧ ವಾರೆಂಟ್‌ನ್ನು ಹೊರಡಿಸಿರುತ್ತದೆ. ಹಾಗೂ ಕಾವೂರು ಮತ್ತು ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಗಳಲ್ಲಿ ದಸ್ತಗಿರಿಯಾಗದೆ ತಲೆಮರೆಸಿಕೊಂಡಿದ್ದಾಳೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article