ರಥಬೀದಿ ಕಾಲೇಜಿನಲ್ಲಿ ‘ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ’
ಮುಖ್ಯ ಅತಿಥಿಯಾಗಿ ಉಡುಪಿಯ ದೊಡ್ಡಣ್ಣಗುಡ್ಡೆಯ ಡಾ. ಎ.ಬಿ. ಬಾಳಿಗಾ ಆಸ್ಪತ್ರೆಯ ಕ್ಲಿನಿಕಲ್ ಸೈಕಾಲಜಿಸ್ಟ್ ನಾಗರಾಜ್ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಾನಸಿಕ ಆರೋಗ್ಯದ ಕುರಿತು ಮಾಹಿತಿ ನೀಡಿ, ವಿದ್ಯಾರ್ಥಿಗಳಿಗೆ ಒತ್ತಡ ನಿರ್ವಹಣೆ, ಆತ್ಮವಿಶ್ವಾಸ, ಧನಾತ್ಮಕ ಚಿಂತನೆ, ಮತ್ತು ಸ್ನೇಹ ಪೂರ್ಣ ವರ್ತನೆಯ ಕುರಿತು ತಿಳಿಸಿದರು.
ಮನಃಶಾಸ್ತ್ರದ ವಿಭಾಗದ ಮುಖ್ಯಸ್ಥ ಮೊಹಮ್ಮದ್ ಇಕ್ಬಾಲ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮಾನಸಿಕ ಆರೋಗ್ಯದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಥಮ ಬಿಎ ವಿದ್ಯಾರ್ಥಿನಿ ಶ್ರೀಜಾ ಮತ್ತು ನಿಖಿತಾ ಅವರು ಮಾನಸಿಕ ಆರೋಗ್ಯದ ಮೇಲೆ ಪ್ರಭಾವ ಬೀರುವ ಅಂಶಗಳ ಕುರಿತು ಮಾತನಾಡಿದರು.
ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ರಸಪ್ರಶ್ನೆ, ಕೊಲಾಜ್ ಹಾಗೂ ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಮುಖ್ಯ ಅತಿಥಿಗಳು ಪ್ರಶಸ್ತಿಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಯೋಜಕ ದೇವಿ ಪ್ರಸಾದ್, ಐಕ್ಯೂಎಸಿ ಸಹ ಸಂಯೋಜಕಿ ಜ್ಯೋತಿಪ್ರಿಯಾ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ. ದುಗ್ಗಪ್ಪ ಕಜೆಕಾರ್, ಮನಃಶಾಸ್ತ್ರ ಸಹ ಪ್ರಾಧ್ಯಾಪಕಿ ಶರ್ಮಿಳಾ, ಉಪನ್ಯಾಸಕರುಗಳು ಉಪಸ್ಥಿತರಿದ್ದರು.
ದ್ವಿತೀಯ ಬಿ.ಎ. ವಿದ್ಯಾರ್ಥಿನಿ ನಿರೀಕ್ಷಾ ಸ್ವಾಗತಿಸಿ, ತೃತೀಯ ಬಿ.ಎ. ವಿದ್ಯಾರ್ಥಿನಿ ಶಿವಾನಿ ಅತಿಥಿ ಪರಿಚಯ ಮಾಡಿದರು. ತೃತೀಯ ಬಿ.ಎ. ವಿದ್ಯಾರ್ಥಿನಿ ಸೃಷ್ಟಿ ಕಾರ್ಯಕ್ರಮವನ್ನು ನಿರ್ವಹಿಸಿ, ಮನಃಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಶರ್ಮಿಳಾ ವಂದಿಸಿದರು.
