ತಿಂಗಳ ಅಂತ್ಯಕ್ಕೆ ಎಸ್‌ಐಟಿ ವರದಿ ಸಲ್ಲಿಸುವ ಸಾಧ್ಯತೆ
ಮಂಗಳೂರು: ಧರ್ಮಸ್ಥಳ ಗ್ರಾಮದ ಸುತ್ತಮುತ್ತ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಈ ತಿಂಗಳ ಅಂತ್ಯಕ್ಕೆ ವರದಿ ಸಲ್ಲಿಸಲಿದೆ ಎನ್ನಲಾಗಿದೆ.
ಜು.20 ರಂದು ಎಸ್‌ಐಟಿ ರಚನೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿತ್ತು. ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣಗಳ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿತ್ತು. ಅದಾದ ಬಳಿಕ ತನಿಖೆಯ ಭಾಗವಾಗಿ ಸಾಕಷ್ಟು ಬೆಳವಣಿಗೆಗಳು ಕೂಡ ನಡೆದಿದ್ದವು. ತದನಂತರ ದೂರು ಕೊಟ್ಟವರೇ ಉಲ್ಟಾ ಹೊಡೆದು ಪ್ರಕರಣದ ತಿರುವನ್ನೇ ಬದಲಾಯಿಸಿದ್ದರು. ಈಗ 100 ದಿನಗಳ ಬಳಿಕ ಎಸ್‌ಐಟಿ ನೀಡುವ ವರದಿ ಕುರಿತಂತೆ ಕುತೂಹಲ ಹೆಚ್ಚಿದೆ.
ವಿಚಾರಣೆ..
ಎಸ್‌ಐಟಿ ಧರ್ಮಸ್ಥಳ ದೇವಾಲಯ ಆಡಳಿತ ಮಂಡಲಿ ನಡೆಸುತ್ತಿರುವ ವಸತಿಗೃಹಗಳ ಬುಕ್ಕಿಂಗ್ ಲೆಡ್ಜರ್ ಸೇರಿದಂತೆ ಹಲವು ದಾಖಲೆಗಳನ್ನು ಸಂಗ್ರಹಿಸಿದೆ. ಜತೆಗೆ ವಸತಿಗೃಹ ಮತ್ತು ಧರ್ಮಸ್ಥಳ ಮಾಹಿತಿ ಕೇಂದ್ರದ ನೌಕರರನ್ನು ಕನಿಷ್ಠ ಐದು ಬಾರಿ ವಿಚಾರಣೆಗೊಳಪಡಿಸಲಾಗಿದೆ. ನಿರ್ದಿಷ್ಠ ಕಾರಣಗಳಿಗಾಗಿಯೇ ಇವರನ್ನು ವಿಚಾರಣೆಗೊಳಪಡಿಸಲಾಗಿದೆ ಎನ್ನಲಾಗಿದೆ.
ಧರ್ಮಸ್ಥಳ ಗ್ರಾಮದಲ್ಲಿ ನಡೆದ ಸಾಮೂಹಿಕ ಹತ್ಯೆಗಳಿಗೆ ಸಂಬಂಧಿಸಿದಂತೆ ವಸತಿಗೃಹಗಳ ಅನೇಕ ದಾಖಲೆಗಳನ್ನು ಸಂಗ್ರಹಿಸಲಾಗಿದೆ. ಜತೆಗೆ ವಸತಿಗೃಹ ಮತ್ತು ಧರ್ಮಸ್ಥಳ ಮಾಹಿತಿ ಕೇಂದ್ರದ ನೌಕರರನ್ನು ಕನಿಷ್ಠ ಐದು ಬಾರಿ ವಿಚಾರಣೆಗೊಳಪಡಿಸಲಾಗಿದೆ. ತನಿಖೆಯ ಭಾಗವಾಗಿ ಎಸ್‌ಐಟಿ ಹಂತ ಹಂತವಾಗಿ ಮಹತ್ವದ ಹೆಜ್ಜೆ ಇಡುತ್ತಿದೆ