ಯುವತಿಯ ಬಟ್ಟೆ ಬದಲಾಯಿಸುವ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್: ಯುವತಿ ಬಂಧನ
Sunday, October 19, 2025
ಮಂಗಳೂರು: ಯುವತಿಯೊಬ್ಬಳು ಬಟ್ಟೆ ಬದಲಾಯಿಸುವ ವೀಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡಿರುವ ಆರೋಪದಡಿಯಲ್ಲಿ ಯುವತಿಯೊಬ್ಬಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ಮೂಲದ, ಮಂಗಳೂರಿನ ಕಂಕನಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ನಿರೀಕ್ಷಾ ಎಂಬಾಕೆ ಬಂಧಿತ ಆರೋಪಿ. ಇತ್ತೀಚೆಗೆ ಕಾರ್ಕಳದ ನಿಟ್ಟೆಯ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣದಲ್ಲಿಯೂ ನಿರೀಕ್ಷಾ ವಿರುದ್ಧ ಹನಿ ಟ್ರ್ಯಾಪ್ ಆರೋಪದ ಕೇಳಿ ಬಂದಿತ್ತು.
ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಹಿನ್ನೆಲೆಯಲ್ಲಿ ನಿರೀಕ್ಷಾಳನ್ನು ರವಿವಾರ ಬಂಧಿಸಿರುವ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ. ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಇತ್ತೀಚೆಗೆ ಬೆಳ್ಮಣ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಅಭಿಷೇಕ್ ಆಚಾರ್ಯ ಬರೆದಿದ್ದ ಡೆತ್ ನೋಟ್‌ನಲ್ಲೂ ನಿರೀಕ್ಷಾ ಹಾಗೂ ಇತರರ ಹೆಸರು ಕೇಳಿ ಬಂದಿತ್ತು. ಬಳಿಕ ನಿರೀಕ್ಷಾ ಬಂಧನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿಯೂ ಆಗ್ರಹ ಕೇಳಿ ಬಂದಿತ್ತು.