ಟೆಕ್ ಪಾರ್ಕ್ ಸ್ಥಾಪನೆ ಸ್ವಾಗತಾರ್ಹ

ಟೆಕ್ ಪಾರ್ಕ್ ಸ್ಥಾಪನೆ ಸ್ವಾಗತಾರ್ಹ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ದೇರೆಬೈಲ್‌ನ ಬ್ಲೂಬೆರ್ರಿ ಹಿಲ್ಸ್ ರಸ್ತೆಯ ಸರ್ವೇ ನಂಬರ್ 129, 113ರ 3.285 ಎಕರೆ ಭೂಮಿಯನ್ನು ವಾಣಿಜ್ಯ ಕಚೇರಿ ಟೆಕ್ ಪಾರ್ಕ್ ಆಗಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಡಿಯಲ್ಲಿ ವಿನ್ಯಾಸ, ನಿರ್ಮಾಣ, ಹಣಕಾಸು, ಕಾರ್ಯಾಚರಣೆ ಮತ್ತು ವರ್ಗಾವಣೆ (ಡಿಬಿಎಫ್‌ಒಟಿ) ಆಧಾರದ ಮೇಲೆ ಅಭಿವೃದ್ಧಿಪಡಿಸಲು ಸಚಿವ ಸಂಪುಟ ನಿರ್ಣಯಿಸಿರುವುದು ಸ್ವಾಗತಾರ್ಹ. 

ಇದರಿಂದ ಕರಾವಳಿಯಲ್ಲಿ ಸಹಸ್ರಾರು ಮಂದಿಗೆ ಉದ್ಯೋಗಾವಕಾಶ ಲಭಿಸಲಿದೆ. ಟೆಕ್ ಪಾರ್ಕ್ ನಿರ್ಮಾಣಕ್ಕೆ ಸಹಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಡಿಸಿಎಂ ಡಿ.ಕೆ. ಶಿವಕುಮಾರ್, ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಪ್ರೀಯಾಂಕ ಖರ್ಗೆಯವರಿಗೆ ಕೃತಜ್ಞತೆಗಳು ಎಂದು ಕಾಂಗ್ರೆಸ್ ಮುಖಂಡ ಪದ್ಮರಾಜ್ ಆರ್. ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article