ಬಲ್ಮಠ ಬಾಲಕಿಯರ ಸರಕಾರಿ ಪಿಯು ಕಾಲೇಜಿನ ಎನ್‌ಎಸ್‌ಎಸ್ ಶಿಬಿರದ ಉದ್ಘಾಟನೆ

ಬಲ್ಮಠ ಬಾಲಕಿಯರ ಸರಕಾರಿ ಪಿಯು ಕಾಲೇಜಿನ ಎನ್‌ಎಸ್‌ಎಸ್ ಶಿಬಿರದ ಉದ್ಘಾಟನೆ


ಮಂಗಳೂರು: ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು ಬಲ್ಮಠ ಇಲ್ಲಿನ ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರವು ನಾಲ್ಯಪದವಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ಶಿಬಿರದ ಧ್ವಜಾರೋಹಣವನ್ನು ನೆರವೇರಿಸಿದ ಕಾಲೇಜಿನ ಪ್ರಾಚಾರ್ಯ ಜಯಾನಂದ ಸುವರ್ಣ ಅವರು ಎನ್‌ಎಸ್‌ಎಸ್ ಶಿಬಿರದಲ್ಲಿ ಶ್ರಮದಾನ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳ ಮಹತ್ವವನ್ನು ತಿಳಿಸಿದರು. 

ಶಿಬಿರವನ್ನು ಉದ್ಘಾಟಿಸಿದ ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಎಂ. ಪುರುಶೋತ್ತಮ್ ಭಟ್ ಮಾತನಾಡಿ, ಶಿಬಿರದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಶಿಸ್ತು, ಸಮಯಪ್ರಜ್ಞೆ ಹಾಗೂ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳುವುದರೊಂದಿಗೆ, ತಂದೆ ತಾಯಿ ಗುರು ಹಿರಿಯರು ದೇಶ ಮತ್ತು ಸಮಾಜವನ್ನು ಪ್ರೀತಿಸುವ ಮನೋಭಾವವನ್ನು ರೂಢಿಸಿಕೊಳ್ಳಬೇಕೆಂದು ತಿಳಿಸಿದರು. 

ಶಕ್ತಿನಗರದ ವಿದ್ಯಾ ದೀವಿಗೆ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ದೇವಾನಂದ, ಕಾನಡ್ಕದ ಪದವು ಪ್ರೆಂಡ್ಸ್ ಕ್ಲಬ್‌ನ ಸದಸ್ಯ ಅಶೋಕ್ ನಾಯಕ್, ಮಾಜಿ ಕಾರ್ಪೋರೇಟ್ ವನಿತ ಪ್ರಸಾದ್ ಶುಭ ಹಾರೈಸಿದರು. 

ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ವನಿತ ದೇವಾಡಿಗ ಮಾತನಾಡಿ, ಶಿಬಿರದಲ್ಲಿ ಸಕ್ರೀಯವಾಗಿ ಭಾಗವಹಿಸುವಂತೆ ವಿದ್ಯಾರ್ಥಿಗಳಿಗೆ ಕರೆಕೊಟ್ಟರು. 

ಎನ್‌ಎಸ್‌ಎಸ್ ಘಟಕದ ಶಿಬಿರಾಧಿಕಾರಿ ಪ್ರವೀಣ ಕಾರ್ಡೋಜ, ನಾಯಕಿ ಸವಿತಾ ಉಪಸ್ಥಿತರಿದ್ದರು. 

ಸಹ ಶಿಬಿರಾಧಿಕಾರಿ ಸಂತೋಷ ಸಿ. ಸ್ವಾಗತಿಸಿ, ಉಪನ್ಯಾಸಕರಾದ ದೀಪಕ್ ಕುಮಾರ್ ಕೆ. ವಂದಿಸಿದರು. ಉಪನ್ಯಾಸಕಿ ಯಶೋಧ ಕೆ. ಕಾರ್ಯಕ್ರಮ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article