
ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದ ಸಿಎಂ
Tuesday, October 21, 2025
ಮಂಗಳೂರು: ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೀಪಾವಳಿ ಅಂಗವಾಗಿ ಸೋಮವಾರ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀಕ್ಷಿಸಿದರು.
ಸಿಎಂ ಸಿದ್ದರಾಮಯ್ಯ ಅವರು ಪುತ್ತೂರಿನಲ್ಲಿ ಆಯೋಜಿಸಲಾಗಿದ್ದ ಅಶೋಕ ಜನ-ಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೆಂಗಳೂರಿಗೆ ವಾಪಸಾಗಲು ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಅಲ್ಲಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ವೀಕ್ಷಿಸಿದರು. ಎಲ್ಲರಿಗೂ ದೀಪಾವಳಿಯ ಶುಭಾಶಯ ಸಲ್ಲಿಸಿದರು.
ಮಾಜಿ ಸಚಿವರಾದ ಬಿ. ರಮಾನಾಥ ರೈ ಮತ್ತು ಅಭಯಚಂದ್ರ ಜೈನ್ ಉಪಸ್ಥಿತರಿದ್ದರು.