ವಿವಿ ಕಾಲೇಜಿನಲ್ಲಿ ರಕ್ತದಾನ ಶಿಬಿರ
ಮಂಗಳೂರು: ಯುವ ರೆಡ್ ಕ್ರಾಸ್ ಮಂಗಳೂರು ವಿಶ್ವವಿದ್ಯಾನಿಲಯ, ಯುವ ರೆಡ್ ಕ್ರಾಸ್ ವಿಶ್ವವಿದ್ಯಾನಿಲಯ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ, ಲಯನ್ಸ್ ಕ್ಲಬ್, ಶ್ರೀ ಸಾಯಿ ಆಶ್ರಯ, ಸಾಯಿ ಶಕ್ತಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಮಂಗಳೂರು ಹಾಗೂ ಭಾರತೀಯ ರೆಡ್ ಕ್ರಾಸ್ ರಕ್ತ ನಿಧಿ, ವೆನ್ಲಾಕ್ ಜಿಲ್ಲಾ ಆಸ್ಪತ್ರೆ ರಕ್ತನಿಧಿ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ಅಕ್ಟೋಬರ್ 15ರಂದು ಬೆಳಗ್ಗೆ 9.30ಕ್ಕೆ ಆಯೋಜಿಸಲಾಗಿದೆ.
ಈ ಕಾರ್ಯಕ್ರಮಕ್ಕೆ ವೆನ್ಲಾಕ್ ಜಿಲ್ಲಾಸ್ಪತ್ರೆಯ ಡಾ. ಶರತ್ ಕುಮಾರ್ ರಾವ್ ಜೆ. ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ವಹಿಸಲಿದ್ದಾರೆ.
ಸಾಯಿ ಆಶ್ರಯದ ಎಸ್‌ಡಿಎಂಸಿ ವ್ಯವಸ್ಥಾಪಕ ಟ್ರಸ್ಟಿ ವಿಶ್ವಾಸ್ ರಾವ್ ಯು.ಎಸ್., ಸಾಯಿ ಶಕ್ತಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ ಅಧ್ಯಕ್ಷ ಜ್ಯೋತಿ ಚಂದ್ರ, ಲಯನ್ಸ್ ಕ್ಲಬ್‌ನ ಅಧ್ಯಕ್ಷ ರಿಯಾಜ್ ಎಂ.ಎ. ರಕ್ಸಿದಿ, ರೆಡ್‌ಕ್ರಾಸ್ ಕಾರ್ಯಕ್ರಮ ಅಧಿಕಾರಿ ಡಾ. ಭಾರತಿ ಪಿಲಾರ್, ಎನ್‌ಎಸ್‌ಎಸ್ ಅಧಿಕಾರಿ ಡಾ. ಸುರೇಶ್, ಮಂಗಳೂರು ವಿಶ್ವವಿದ್ಯಾನಿಲಯದ ರೆಡ್‌ಕ್ರಾಸ್ ನೋಡಲ್ ಅಧಿಕಾರಿ ಡಾ. ಗಾಯತ್ರಿ ಎನ್., ವೆನ್ಲಾಕ್ ಜಿಲ್ಲಾಸ್ಪತ್ರೆಯ ರಕ್ತನಿಧಿಯ ಉಸ್ತುವಾರಿ ಅಂಟೋನಿ ಡಿ’ಸೋಜಾ ಉಪಸ್ಥಿತರಿಲಿದ್ದಾರೆ ಎಂದು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಕಟಣೆ ತಿಳಿಸಿದೆ.