ದೆಹಲಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ: ಪಿ.ಎಂ. ನರೇಂದ್ರ ಸ್ವಾಮಿ
Monday, October 13, 2025
ಮಂಗಳೂರು: ’ನಾನು ದೆಹಲಿಗೆ ತೆರಳುತ್ತಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ, ನ.18-19ರಂದು ಬೆಂಗಳೂರಿನಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಸಂಭ್ರಮಾಚರಣೆ ನಡೆಯಲಿದ್ದು, ಕಾರ್ಯಕ್ರಮಕ್ಕೆ ಕೇಂದ್ರ ಮಂಡಳಿ ಅಧ್ಯಕ್ಷರು, ಅರಣ್ಯ ಇಲಾಖೆ ಮುಖ್ಯಸ್ಥರು ಮತ್ತು ರಾಹುಲ್ ಗಾಂಧಿಯವರನ್ನು ಆಹ್ವಾನಿಸಲು ಹೋಗುತ್ತಿದ್ದೇನೆ” ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ, ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಹೇಳಿಕೆ ನೀಡಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ಯಾವುದೇ ಉದ್ದೇಶವಿಲ್ಲ. ಸಚಿವ ಸಂಪುಟ ವಿಸ್ತರಣೆ ಪಕ್ಷದ ಆಂತರಿಕ ವಿಚಾರವಾಗಿದ್ದು ನಾನು ಬಹಿರಂಗವಾಗಿ ಚರ್ಚೆ ಮಾಡಲು ಇಚ್ಛಿಸುವುದಿಲ್ಲ” ಎಂದರು.
ಆರೆಸ್ಸೆಸ್ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ವೈಯಕ್ತಿಕ.ಯಾವ ಸಂದರ್ಭ ಸನ್ನಿವೇಶಗಳಿಗೆ ಸಂಬಂಧಿಸಿದ ಅವರು ಪತ್ರ ಬರೆದಿದ್ದಾರೋ ಗೊತ್ತಿಲ್ಲ. ಯಾವುದೇ ಸಂವಿಧಾನ ವಿರೋಧಿ ವಿಚಾರಗಳಿದ್ದರೆ ಅದರ ಬಗ್ಗೆ ಕ್ರಮ ಕೈಗೊಳ್ಳುವುದಕ್ಕೆ ಸರಕಾರಕ್ಕೆ ಅಧಿಕಾರವಿದೆ” ಎಂದರು.