ವಾಲ್ಮೀಕಿ ಜಯಂತಿ: ಮಹಾಕಾವ್ಯಗಳಿಂದ ಜಗತ್ತಿಗೆ ಶ್ರೇಷ್ಠ ಕೊಡುಗೆ

ವಾಲ್ಮೀಕಿ ಜಯಂತಿ: ಮಹಾಕಾವ್ಯಗಳಿಂದ ಜಗತ್ತಿಗೆ ಶ್ರೇಷ್ಠ ಕೊಡುಗೆ


ಮಂಗಳೂರು: ಜಗತ್ತಿಗೆ ನೀಡಬಲ್ಲ ಶ್ರೇಷ್ಟಕೊಡುಗೆ ಭಾರತೀಯ ಕುಟುಂಬ ಪದ್ಧತಿ. ಸಹಸ್ರಾರು ವರ್ಷಗಳಿಂದ ಈ ಪದ್ಧತಿಯನ್ನು ಉಳಿಸಿಕೊಳ್ಳುವಲ್ಲಿ ರಾಮಾಯಾಣ, ಮಹಾಭಾರತ ಮಹಾಕಾವ್ಯಗಳಲ್ಲಿರುವ ಜೀವನ ಮೌಲ್ಯಗಳು ಪ್ರಮುಖ ಕಾರಣ ಎಂದು ಕರ್ನಾಟಕ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು.

ಅವರು ಮಂಗಳವಾರ ಜಿಲ್ಲಾ ಪಂಚಾಯಿತಿಯ ನೇತ್ರಾವತಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅವರ ಸಂಯುಕ್ತ ಆಶ್ರಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. 

ವಾಲ್ಮೀಕಿ ರಾಮಾಯಣದಲ್ಲಿ ರಾಮ, ರಾವಣ ಕುರಿತು ಮಾತ್ರ ಪರಿಚಯವಿಲ್ಲ ಬದಲಾಗಿ ಪ್ರತಿಯೊಬ್ಬರ ಜೀವನಕ್ಕೂ ಆದರ್ಶವಾಗುವ ಮೌಲ್ಯಗಳಿಗೆ ಬಲ ಕೊಡುವ ವಿಚಾರಗಳನ್ನು ತಿಳಿಸುವ ಕೆಲಸವಾಗಿದೆ ಎಂದರು. 

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಮಾತನಾಡಿ, ಮಹಾಕಾವ್ಯಗಳು ದೇಶದ ಗಡಿ ದಾಟುವ ಜತೆಗೆ ಮಣ್ಣಿನ ಗುಣವನ್ನು ಬೆಳೆಸಿಕೊಂಡು ಎಲ್ಲ ಕಾಲಕ್ಕೂ ಎಲ್ಲ ಪ್ರದೇಶಗಳಲ್ಲಿರುವ ಜನಮಾನಸದಲ್ಲಿ ನೆಲೆಯೂರಿ ಬಿಡುತ್ತದೆ ಎಂದರು. 

ಮೂಲ್ಕಿ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ವಾಸುದೇವ ಬೆಳ್ಳೆ ಮಹರ್ಷಿ ವಾಲ್ಮೀಕಿ ಕುರಿತು ಉಪನ್ಯಾಸ ನೀಡಿದರು. ಈ ಬಳಿಕ ಅತೀ ಹೆಚ್ಚು ಅಂಕ ಗಳಿಸಿದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಯಿತು. 

ದ.ಕ. ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ರಾಜು , ಜಿ.ಪಂ. ಉಪಕರ್ಯದರ್ಶಿ ಜಯಲಕ್ಷ್ಮಿ, ಡಿಸಿಪಿ ಮಿಥುನ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರಾಜೇಶ್ವರಿ ಎಚ್.ಎಚ್, ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಶಶಿಧರ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕ ಗೋಕುಲ್‌ದಾಸ್ ನಾಯಕ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಬಸವರಾಜು ಎಚ್.ಸಿ. ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ್ ಅಡಿಗ ಸ್ವಾಗತಿಸಿದರು. ಮಂಜುಳಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article