ಕರಾವಳಿಯಲ್ಲಿ ಉತ್ತಮ ಮಳೆ
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ರಾತ್ರಿಯಿಂದ ನಿರಂತರವಾಗಿ ಬಿಡುವು ಕೊಡದೆ ಮಳೆಯಾಗುತ್ತಿದೆ.
ಮಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಜೋರಾದ ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಭಾರೀ ಮಳೆಯಾಗುತ್ತಿದೆ. ಇನ್ನೊಂದೆಡೆ ಬಂಗಾಳ ಕೊಲ್ಲಿಯಲ್ಲಿ ಮೊಂತಾ ಚಂಡಮಾರುತ ಎದ್ದಿದ್ದು, ಭಾರೀ ಮಳೆಯ ಅಲರ್ಟ್ ನೀಡಲಾಗಿದೆ.
ಇನ್ನು ಕರಾವಳಿಯ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಸೋಮವಾರ ‘ಆರೆಂಜ್ ಅಲರ್ಟ್’ ನೀಡಲಾಗಿದ್ದು, ಈ ಜಿಲ್ಲೆಗಳ ಕೆಲವೆಡೆ ನಿರಂತರ ಗಾಳಿಯೊಂದಿಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಂಭವವಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.
ಕರಾವಳಿಯ ಎಲ್ಲಾ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಂಗಳವಾರವೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಒಂದು ವಾರ ಮಳೆ ಮುಂದುವರಿಯುವ ಬಗ್ಗೆ ಇಲಾಖೆ ಮುನ್ಸೂಚನೆ ನೀಡಿದೆ.
ಸಮುದ್ರಕ್ಕೆ ಮೀನುಗಾರರಿಗೆ ಇಳಿಯದಂತೆ ಕೋಸ್ಟ್ ಗಾರ್ಡ್ ಸೂಚನೆ ನೀಡಿದ್ದು, ಕೂಡಲೇ ದಡ ಸೇರುವಂತೆ ತಿಳಿಸಿದೆ.