ಕಲ್ಲಡ್ಕ ಪ್ರಭಾಕರ್ ಭಟ್: ನಿರೀಕ್ಷಣಾ ಜಾಮೀನು ಅರ್ಜಿ ನ.4ಕ್ಕೆ ಮುಂದೂಡಿಕೆ
Wednesday, October 29, 2025
ಮಂಗಳೂರು: ಕಲ್ಲಡ್ಕ ಪ್ರಭಾಕರ ಭಟ್ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯಲ್ಲಿ ಬಿಎನ್‌ಎಸ್‌ಎಸ್ ಸೆಕ್ಷನ್ 338 - 339 ಅಡಿ ಅವಕಾಶ ಕೋರಿ ದೂರುದಾರರಾಗಿರುವ ಈಶ್ವರಿ ಪದ್ಮುಂಜ ಅವರು ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯ ವಿಚಾರಣೆಯನ್ನು ನ.4ಕ್ಕೆ ಮುಂದೂಡಿದೆ.
ಪ್ರಾಸಿಕ್ಯೂಶನ್ ಜೊತೆ ದೂರುದಾರರ ವಕೀಲರ ವಾದವನ್ನೂ ಆಲಿಸಿ ಜಾಮೀನು ನೀಡುವ ಬಗ್ಗೆ ಕೋರ್ಟ್ ವಿವೇಚನೆಯನ್ನು ಬಳಸಿಕೊಳ್ಳಬೇಕು ಎಂದು ಈಶ್ವರಿ ಪದ್ಮುಂಜರವರ ಪರವಾಗಿ ಹಿರಿಯ ವಕೀಲ ಸತೀಶನ್ ಅವರು ಅರ್ಜಿ ಸಲ್ಲಿಸಿ ವಾದ ಮಂಡಿಸಿದ್ದಾರೆ.