ವಿರಳಾತಿವಿರಳ ಕಾಯಿಲೆಯಿಂದ ಬಳಲುತ್ತಿದ್ದ ಚಾಂದಿನಿ ಕೊನೆಗೂ ಸಾವು

ವಿರಳಾತಿವಿರಳ ಕಾಯಿಲೆಯಿಂದ ಬಳಲುತ್ತಿದ್ದ ಚಾಂದಿನಿ ಕೊನೆಗೂ ಸಾವು


ಮಂಗಳೂರು: ವಿರಳ ಹಾಗೂ ತೀರ ಅಪರೂಪದ ಖಾಯಿಲೆ Hyper IGE Mediated Mast cell activation syndromeನಿಂದ ಬಳಲುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆ (Mangaluru) ಸುಳ್ಯ ಗಾಂಧಿನಗರ ನಿವಾಸಿ ಚಾಂದಿನಿ ಕೊನೆಗೂ ಸಾವನ್ನಪ್ಪಿದ್ದಾರೆ. 

ಕಳೆದ ಕೆಲವು ವರ್ಷಗಳಿಂದ ಚಾಂದಿನಿ ಈ ಕಾಯಿಲೆಯಿಂದ ಬಳಲುತ್ತಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದರು. ಇವರಿಗಿದ್ದ ಕಾಯಿಲೆ ಏನು ಎಂಬುದನ್ನು ಪತ್ತೆ ಮಾಡಲು ಆರೋಗ್ಯ ಇಲಾಖೆಗೆ ಬಹಳ ಸಮಯ ಹಿಡಿದಿತ್ತು. ಅಂತಿಮವಾಗಿ ಇವರಿಗೆ ಇದ್ದಿದ್ದು ಬಹಳ ಅಪರೂಪದ ಕಾಯಿಲೆ ಎಂದು ಗೊತ್ತಾಗಿ, ಅದಕ್ಕೆ ಚಿಕಿತ್ಸೆ ನೀಡಲಾಗುತ್ತಿತ್ತು.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಶಾಲೆಯೊಂದರಲ್ಲಿ ನೃತ್ಯ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಚಾಂದಿನಿ ಆರೋಗ್ಯ ತೀರಾ ಹದಗೆಟ್ಟಿತ್ತು. ಒಂದಲ್ಲ ಒಂದು ಕಾಯಿಲೆಯಿಂದ ಬಳಲ್ತಿದ್ದ ಚಾಂದಿನಿಗೆ ತನಗಿರುವ ಈ ಅಪರೂಪದ ಕಾಯಿಲೆ ಬಗ್ಗೆ ಗೊತ್ತೇ ಇರಲಿಲ್ಲ. ಹೀಗಾಗಿ ಸುಳ್ಯ, ಮಂಗಳೂರು ಸೇರಿದಂತೆ ಹಲವೆಡೆ ಚಿಕಿತ್ಸೆ ಪಡೆದಿದ್ರೂ ಕೂಡ ಗುಣಮುಖರಾಗಿರಲಿಲ್ಲ. ಚಾಂದಿನಿ ಅವರು ಬಳಲುತ್ತಿದ್ದ Hyper IGE Mediated Mast cell activation syndromeಗೆ ಜಿಲ್ಲಾ ಮಟ್ಟದಲ್ಲಿ ಚಿಕಿತ್ಸಾ ಸೌಲಭ್ಯ ಇಲ್ಲ ಎಂದು ಆರೋಗ್ಯ ಇಲಾಖೆ ಹೇಳಿದ್ದ ಕಾರಣ, ಹೈದರಾಬಾದ್?ನ AIG ಆಸ್ಪತ್ರೆಗೆ ಚಾಂದಿನಿ ಅವರನ್ನು ದಾಖಲಿಸಲಾಗಿತ್ತು.

ಖಾಯಿಲೆಯನ್ನೂ ಅದೇ ಆಸ್ಪತ್ರೆ ಪತ್ತೆ ಮಾಡಿದ್ದು, ಆ ವರದಿಯನ್ನ ಕರ್ನಾಟಕ ಸರ್ಕಾರಕ್ಕೆ ಚಾಂದಿನಿ ನೀಡಿದ್ದರು. ಆದ್ರೆ ಚಿಕಿತ್ಸೆಗೆ ಸರ್ಕಾರ ಸಕಾಲದಲ್ಲಿ ಹಣ ಬಿಡುಗಡೆ ಮಾಡದ ಕಾರಣ ನಿಗದಿತ ಆಸ್ಪತ್ರೆಗಳಲ್ಲಿ ಚಾಂದಿನಿ ಅವರಿಗೆ ಸರಿಯಾಗಿ ಚಿಕಿತ್ಸೆ ಸಿಗಲಿಲ್ಲ ಎನ್ನಲಾಗಿದೆ. ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ನಿನ್ನೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಅವರು ಸಾವನ್ನಪ್ಪಿದ್ದಾರೆ. ಸರಕಾರದ ನಿರ್ಲಕ್ಷ್ಯದಿಂದಲೇ ಈ ಸಾವು ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದೆ.

ತೀರ ಅಪರೂಪದ ಈ ಕಾಯಿಲೆಯ ಲಕ್ಷಣ ಏನು?

ಹೈಪರ್-IgE ಸಿಂಡ್ರೋಮ್ ನಿಂದ ಬಳಲುತ್ತಿರುವವರಲ್ಲಿ ಚರ್ಮದ ಸಮಸ್ಯೆ ಸೇರಿ ಜೀರ್ಣಾಂಗ, ಉಸಿರಾಟದ ತೊಂದರೆ ಮತ್ತು ನರ ಸಂಬಂಧಿತ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಚರ್ಮ ಕೆಂಪಾಗುವುದು, ಉಬ್ಬಸ, ಮಲಬದ್ಧತೆ, ಹೊಟ್ಟೆ ನೋವು, ಬ್ರೇನ್ ಫಾಗ್, ಹಲ್ಲಿನ ಸಮಸ್ಯೆಗಳು ಸೇರಿ ಹತ್ತು ಹಲವು ಲಕ್ಷಣಗಳು ಕಂಡುಬರುತ್ತವೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article