ಡಾ. ಕಿಶೋರ್ ಕುಮಾರ್ ಸಿ.ಕೆ. ನಿಧನಕ್ಕೆ ಶಾಸಕ ಕಾಮತ್ ಸಂತಾಪ
Sunday, October 5, 2025
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಕುಲಸಚಿವರು, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾಗಿದ್ದ ಡಾ. ಕಿಶೋರ್ ಕುಮಾರ್ ಸಿ.ಕೆ. ಅವರ ಅಗಲಿಕೆಗೆ ಶಾಸಕ ವೇದವ್ಯಾಸ ಕಾಮತ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದರು.
ತಮ್ಮ ಸರಳ ನಡೆ ಹಾಗೂ ನೇರ ನುಡಿಯಿಂದ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು, ಸಿಬ್ಬಂದಿಗಳ ಪಾಲಿನ ಅಚ್ಚುಮೆಚ್ಚಿನ ವ್ಯಕ್ತಿಯಾಗಿದ್ದ ಅವರದ್ದು, ದೇಹ ತ್ಯಜಿಸಿದರೂ ಬಹುಕಾಲ ನೆನಪಿನಲ್ಲಿ ಉಳಿಯುವಂತಹ ವ್ಯಕ್ತಿತ್ವ. ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತಾ ಕುಟುಂಬ ವರ್ಗಕ್ಕೆ, ಬಂಧು ಮಿತ್ರರಿಗೆ, ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ, ಸಿಬ್ಬಂದಿಗಳಿಗೆ, ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಕರುಣಿಸಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಶಾಸಕರು ಸಂತಾಪ ವ್ಯಕ್ತಪಡಿಸಿದ್ದಾರೆ.