ಸಮೀಕ್ಷೆಯಿಂದ ವಿದ್ಯಾರ್ಥಿಗಳಿಗೆ ತೊಡಕಾಗದು: ಮಧು ಬಂಗಾರಪ್ಪ
ಬುಧವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲಾ ವಾರ್ಷಿಕ ಕ್ಯಾಲೆಂಡರ್‌ನಂತೆ 242 ದಿನಗಳಿವೆ. ಆರ್‌ಟಿಇ ಕಾಯ್ದೆ ಪ್ರಕಾರ 220 ದಿನಗಳನ್ನು ಕಡ್ಡಾಯವಾಗಿ ಬಳಸಬೇಕಾಗಿದೆ. ಇದೀಗ 9 ದಿನಗಳವರೆಗೆ ಸಮೀಕ್ಷೆಯನ್ನು ವಿಸ್ತರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ರಾಜ್ಯ ಶಿಕ್ಷಕರ ಸಂಘದ ಸಲಹೆಯ ಮೇರೆಗೆ ಮುಖ್ಯಮಂತ್ರಿ ಈ ನಿರ್ಧಾರ ಮಾಡಿದ್ದಾರೆ ಎಂದರು.
ರಾಜ್ಯದಲ್ಲಿ ಇದುವರೆಗೆ ಶೇ.81ರಷ್ಟು ಸಮೀಕ್ಷೆ ಪೂರ್ಣವಾಗಿದೆ. ಬೆಂಗಳೂರಿನಲ್ಲಿ ಇದು ಕ್ಷೀಣವಾಗಿದ್ದು, ಶೇ. 38ರಷ್ಟು ಮಾತ್ರವೇ ಆಗಿದೆ. ಅಲ್ಲಿ ಸಮೀಕ್ಷೆ ಆರಂಭಗೊಂಡಿರುವುದೇ ಅಕ್ಟೋಬರ್ 4ರಿಂದ. ದ.ಕ. ಜಿಲ್ಲೆಯಲ್ಲಿ ನಿನ್ನೆಯವರೆಗೆ ಶೇ.68ರಷ್ಟು, ಉಡುಪಿಯಲ್ಲಿ ಶೇ. 62ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ ಎಂದು ಸಚಿವರು ವಿವರ ನೀಡಿದರು.
ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮುಖಂಡರಾದ ವೇಣೂರು ಗೋಪಾಲಕೃಷ್ಣ, ಎ.ಎಸ್. ರವಿ, ಭೀಮಣ್ಣ, ಪ್ರದೀಪ್ ಈಶ್ವರ್, ಪಿ.ವಿ. ಮೋಹನ್, ಅಶೋಕ್‌ಕುಮಾರ್, ಪದ್ಮರಾಜ್, ವಿಶ್ವಾಸ್‌ದಾಸ್, ಮಂಜುನಾಥ್ ಪೂಜಾರಿ, ರಕ್ಷಿತ್ ಶಿವರಾಂ, ರಾಜು ಪೂಜಾರಿ, ಮಮತಾ ಗಟ್ಟಿ ಮೊದಲಾದವರು ಉಪಸ್ಥಿತರಿದ್ದರು.