ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಾಗಾರ
Monday, October 13, 2025
ಮಂಗಳೂರು: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ವತಿಯಿಂದ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಪಟ್ಟ ಜಿಲ್ಲಾ ಮಟ್ಟದ ಕಾರ್ಯಗಾರವು ಅ.13 ರಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಜಿಲ್ಲಾ ಮಟ್ಟದ ಕಾರ್ಯಾಗಾರದ ಉದ್ಘಾಟನೆಯನ್ನು ವಿಧಾನಪರಿಷತ್‌ನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ನೆರವೇರಿಸಿ ಮಾತನಾಡಿ, ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಕಾರ್ಯಕರ್ತರಾಗಿ ಯಾವ ರೀತಿಯಲ್ಲಿ ಕೆಲಸ ಮಾಡಬೇಕು ಎಂಬುದರ ಪೂರ್ಣ ಪ್ರಮಾಣದ ಮಾಹಿತಿಯನ್ನು ನೀಡಿದರು.
ಕಾರ್ಯಾಗಾರದ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ವಹಿಸಿದ್ದರು.
ಜಿಲ್ಲಾ ಉಪಾಧ್ಯಕ್ಷೆ ಪೂಜಾ ಪ್ರಶಾಂತ್ ಪೈ ವಂದೇಮಾತರಂ ಹಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ ಸ್ವಾಗತಿಸಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಗುರುಚರಣ್ ಮಂಡಲಗಳಿಂದ ವರದಿಗಳನ್ನು ತೆಗೆದುಕೊಂಡರು. ಜಿಲ್ಲಾ ಕಾರ್ಯದರ್ಶಿ ಪೂರ್ಣಿಮಾ ಎಂ. ವಂದಿಸಿ, ಜಿಲ್ಲಾ ಕಾರ್ಯದರ್ಶಿ ದೇವಪ್ಪ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.
ಶಾಸಕರುಗಳಾದ ರಾಜೇಶ್ ನಾಕ್, ಉಮಾನಾಥ್ ಕೋಟ್ಯಾನ್, ಡಿ. ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ವಿಧಾನಪರಿಷತ್ ಸದಸ್ಯರುಗಳಾದ ಪ್ರತಾಪಸಿಂಹ ನಾಯಕ್, ಕಿಶೋರ್ ಕುಮಾರ್ ಪಿ, ಮಾಜಿ ಶಾಸಕರುಗಳಾದ ಸಂಜೀವ ಮಠಂದೂರು, ಕೆ. ಮೋನಪ್ಪ ಭಂಡಾರಿ, ಬಾಲಕೃಷ್ಣ ಭಟ್ ಮತ್ತಿತರರು ಉಪಸ್ಥಿತರಿದ್ದರು.
