 
ಮಾದಕ ವಸ್ತು ಮಾರಾಟ: ಇಬ್ಬರ ಬಂಧನ
Sunday, October 19, 2025
ಮಂಗಳೂರು: ಜಪ್ಪು ಕುಡುಪಾಡಿ ರೈಲ್ವೆ ಬ್ರಿಡ್ಜ್ ಬಳಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ.
ಸ್ಥಳೀಯರಾದ ಮಾಹಿನ್ ಅಬ್ದುಲ್ ರೆಹಮಾನ್ ಮತ್ತು ಅಮ್ರಾಝ್ ಬಂಧಿತ ಆರೋಪಿಗಳು.
ಆರೋಪಿಗಳಿಂದ 60 ಸಾವಿರ ರೂ. ಮೌಲ್ಯದ 14.44 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು 1.53 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.