ಕಿಶೋರ್ ಕುಮಾರ್ ಸಿ.ಕೆ. ನಿಧನಕ್ಕೆ ಮಂಜುನಾಥ ಭಂಡಾರಿ ಸಂತಾಪ
Sunday, October 5, 2025
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಉತ್ತಮ ಆಟಗಾರರಾಗಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಪ್ರಾಧ್ಯಾಪಕರಾಗಿ ನಾಡಿನಾದ್ಯಂತ ತಮ್ಮದೇ ಆದ ವ್ಯಕ್ತಿತ್ವವನ್ನು ರೂಪಿಸಿಕೊಂಡಿದ್ದ ಕಿಶೋರ್ ಕುಮಾರ್ ಸಿ.ಕೆ. ಅವರು ನಿಧನರಾಗಿರುವುದು ಅತೀವ ನೋವನ್ನುಂಟು ಮಾಡಿದೆ.
ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾಗಿ ಆಡಳಿತದಲ್ಲೂ ತಮ್ಮದೇ ಛಾಪನ್ನು ಮೂಡಿಸಿದ್ದವರು ಡಾ. ಕಿಶೋರ್ ಕುಮಾರ್ ಸಿ.ಕೆ. ಅವರು. ಅಗಲಿದ ಆತ್ಮಕ್ಕೆ ಚಿರಶಾಂತಿ ದೊರಕಲಿ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಪ್ರಕಟಣೆಯಲ್ಲಿ ತೀವ್ರ ಸಂತಾಪ ಸೂಚಿಸಿದ್ದಾರೆ.