ವಿಜ್ಞಾನ ವಿದ್ಯಾರ್ಥಿಗಳಿಗೆ ಉಜ್ವಲ ಅವಕಾಶಗಳಿವೆ: ಪ್ರೊ. ರೊನಾಲ್ಡ್ ಪಿಂಟೋ

ವಿಜ್ಞಾನ ವಿದ್ಯಾರ್ಥಿಗಳಿಗೆ ಉಜ್ವಲ ಅವಕಾಶಗಳಿವೆ: ಪ್ರೊ. ರೊನಾಲ್ಡ್ ಪಿಂಟೋ


ಮಂಗಳೂರು: ವಿಜ್ಞಾನ ವಿಷಯಗಳಲ್ಲಿ ಪದವಿಯ ನಂತರ ವೈವಿಧ್ಯಮಯ ಮತ್ತು ಬಹು ಬೇಡಿಕೆಯ ಉನ್ನತ ಶಿಕ್ಷಣ ಮತ್ತು ಔದ್ಯೋಗಿಕ ಅವಕಾಶಗಳು ಲಭ್ಯವಿದೆ’ ಎಂದು ಸಂತ ಅಲೋಶಿಯಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಮತ್ತು ತರಬೇತಿದಾರ ಪ್ರೊ. ರೊನಾಲ್ಡ್ ಪಿಂಟೋ ಹೇಳಿದರು.

ಅವರು ಅ.15 ರಂದು ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ, ವಿಜ್ಞಾನ ಸಂಘ, ವೃತ್ತಿ ಮಾರ್ಗದರ್ಶನ ಹಾಗೂ ಉದ್ಯೋಗ ಭರವಸಾ ಕೋಶ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಜ್ಞಾನ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಅವಕಾಶ ಮತ್ತು ವೃತ್ತಿ ಮಾರ್ಗದರ್ಶನ ಕುರಿತು ಏರ್ಪಡಿಸಲಾದ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡುತ್ತಿದ್ದರು.

ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಣದ ನಂತರ ವಿಜ್ಞಾನದ ವಿವಿಧ ವಿಭಾಗಗಳಲ್ಲಿ ಲಭ್ಯವಿರುವ ಉನ್ನತ ಶಿಕ್ಷಣ ಅವಕಾಶಗಳು ಹಾಗೂ ಉದ್ಯೋಗ ಅವಕಾಶಗಳ ಕುರಿತು ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿಯ ಕುರಿತು ಅವರು ವಿವರಿಸಿದರು.

ಪ್ರಾಂಶುಪಾಲ ಪ್ರೊ. ಜಯಕರ ಭಂಡಾರಿ ಎಂ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿಯ ಸಂಚಾಲಕ ದೇವಿಪ್ರಸಾದ್, ಸಹ-ಸಂಚಾಲಕಿ ಡಾ. ಜ್ಯೋತಿಪ್ರಿಯಾ, ವಿಜ್ಞಾನ ವಿಭಾಗದ ಸಂಯೋಜಕಿ ಪ್ರೊ. ವಸಂತಿ ಪಿ., ವಿಜ್ಞಾನ ಸಂಘದ ಸಂಚಾಲಕ ಡಾ. ರಮಾಕಾಂತ ಪುರಾಣಿಕ್ ಹಾಗೂ ವಿಜ್ಞಾನ ವಿಭಾಗದ ಬೋಧಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ತೇಜಸ್ವಿನಿ ಸ್ವಾಗತಿಸಿ, ಅನನ್ಯ ವಂದಿಸಿದರು. ಸೃಷ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ವಿಜ್ಞಾನ ವಿಭಾಗದ ಸುಮಾರು 200ಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಿದ್ದರು.


Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article