
ಮಹಿಳೆಗೆ ಸಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ ಸಂದೇಶ: ಬಂಧನ
ಈ ಬಗ್ಗೆ ಅಕ್ಟೋಬರ್ ೧೮ರಂದು ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ. 146/2025, ಕಲಂ 79, 190 ಬಿ.ಎನ್.ಎಸ್, 66(ಎ), 67 ಐಟಿ ಆಕ್ಟ್ ಮತ್ತು 3(1)(w)(i)(ii) ಎಸ್‌ಸಿ/ಎಸ್‌ಟಿ ಕಾಯ್ದೆಗಳ ಅಡಿಯಲ್ಲಿ ದಾಖಲಾಗಿತ್ತು.
ಕಾರ್ಕಳ ನಿಟ್ಟೆ ಗ್ರಾಮದ ಅಭಿಷೇಕ್ ಆಚಾರ್ಯ ಎಂಬಾತ ದೂರುದಾರರ ಅಶ್ಲೀಲ ವಿಡಿಯೋ ಮತ್ತು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾ ನೆ. ಆತ ಆತ್ಮಹತ್ಯೆ ಮಾಡಲು ಮೊದಲು ನೇಣು ಹಾಕಿರುವ ಫೋಟೋವನ್ನು ದೂರುದಾರರಿಗೆ ಕಳುಹಿಸಿದ್ದನು. ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನೆಯ ನಂತರ ಅಭಿಷೇಕ್ ಆಚಾರ್ಯನ ತಮ್ಮ ಅಭಿಜಿತ್ ಆಚಾರ್ಯ ಹಾಗೂ ಇತರರು ಅಭಿಷೇಕ್ ಬರೆದಿದ್ದ ಡೆತ್ ನೋಟ್ ಹಾಗೂ ದೂರುದಾರರ ಅಶ್ಲೀಲ ಫೋಟೋಗಳನ್ನು ಯೂಟ್ಯೂಬ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸಪ್ ಗ್ರೂಪ್‌ಗಳಲ್ಲಿ ವೈರಲ್ ಮಾಡಿ ದೂರುದಾರರ ಮಾನಹಾನಿ ಮಾಡಿರುವುದಾಗಿ ದೂರಿನಲ್ಲಿ ಹೇಳಲಾಗಿದೆ.
ದೂರುದಾರರು ಪರಿಶಿಷ್ಟ ಜಾತಿಗೆ ಸೇರಿದ್ದು, ಈ ರೀತಿಯ ಅಶ್ಲೀಲ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡುವ ಮೂಲಕ ಜಾತಿ ನಿಂದನೆಯ ಚ್ಯುತಿ ಉಂಟುಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ತನಿಖೆಯ ವೇಳೆ, ಅಭಿಷೇಕ್ ಆಚಾರ್ಯನ ಸಾವಿನ ನಂತರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಕೆಲವು ಸಂದೇಶಗಳಲ್ಲಿ ಜಾತಿ ನಿಂದನೆಯ ಶಬ್ದಗಳನ್ನು ಬಳಕೆ ಮಾಡಿರುವುದಕ್ಕೆ ಸಾಕ್ಷ್ಯಾಧಾರಗಳು ದೊರೆತಿವೆ.
ಈ ಹಿನ್ನೆಲೆಯಲ್ಲಿ ಆಪಾದಿತ ನಿಖಿಲ್ ರಾಜ್ (27) ಮಂಗಳೂರು ಕೇಂದ್ರ ಉಪ ವಿಭಾಗದ ಎಸಿಪಿ ಪ್ರತಾಪ್ ಸಿಂಗ್ ಥೋರಟ್ ಅವರ ನೇತೃತ್ವದಲ್ಲಿ ಬಂಧಿಸಲಾಗಿದೆ. ಆತ ಬಳಸುತ್ತಿದ್ದ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದ್ದು, ಮುಂದಿನ ತನಿಖೆಗೆ ಒಳಪಡಿಸಲಾಗಿದೆ. ಆರೋಪಿಯನ್ನು ಶೀಘ್ರದಲ್ಲೇ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ದಾಖಲಾಗಿ ತನಿಖೆ ಮುಂದುವರಿಯುತ್ತಿದೆ. ಇಂತಹ ಕೃತ್ಯಗಳಲ್ಲಿ ಭಾಗಿಯಾಗಿರುವ ಇತರರ ಮೇಲೂ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.