ಎಸ್‌ಐಟಿ ಅಂತಿಮ ವರದಿಗೆ ಒತ್ತಡ ಬೇಡ
ಮಂಗಳೂರು: ಧರ್ಮಸ್ಥಳದಲ್ಲಿ ಅತ್ಯಾಚಾರ, ಮಹಿಳೆಯರ ಅಸಹಜ ಸಾವು, ನಾಪತ್ತೆ, ಕೊಲೆ, ಇತ್ಯಾದಿ ಹಿಂಸೆಯ ಪ್ರಕರಣಗಳ ಕುರಿತು ಸಮಗ್ರ ತನಿಖೆ ಕೈಗೊಳ್ಳುವಂತೆ ಎಸ್‌ಐಟಿಗೆ ನಿರ್ದೇಶನ ನೀಡಬೇಕೆಂದು ಸರ್ಕಾರವನ್ನು ಆಗ್ರಹಿಸಿ ಮಂಗಳೂರಿನ ‘ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆ’ ಯ ಸದಸ್ಯೆಯರು ‘ಕೊಂದವರು ಯಾರು’ ಅಭಿಯಾನದ ಭಾಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.
ಧರ್ಮಸ್ಥಳ ಪ್ರಕರಣಗಳ ಕುರಿತ ಎಸ್‌ಐಟಿಯ ಅಂತಿಮ ವರದಿಯನ್ನು ಈ ತಿಂಗಳೊಳಗೆ ಕೊಡುವಂತೆ ಗೃಹಮಂತ್ರಿಗಳು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳ ವ್ಯಾಪ್ತಿಯ ಎಲ್ಲ ಬಗೆಗಳ ಅಪರಾಧ ಪ್ರಕರಣಗಳಲ್ಲಿ ಎಸ್‌ಐಟಿ ಸಂಪೂರ್ಣವಾಗಿ ಮತ್ತು ನಿಷ್ಪಕ್ಷಪಾತವಾಗಿ ಸಮಗ್ರವಾಗಿ ತನಿಖೆ ನಡೆಸಿ ನಿಜವಾದ ಅಪರಾಧಿಗಳನ್ನು ಪತ್ತೆಹಚ್ಚುವವರೆಗೂ ಎಸ್‌ಐಟಿ ಅಂತಿಮ ವರದಿ ಕೊಡುವಂತೆ ಮತ್ತು ಅರ್ಧಕ್ಕೆ ಕೆಲಸ ಮುಗಿಸುವಂತೆ ಅದರ ಮೇಲೆ ಒತ್ತಡ ಹೇರಬಾರದು ಎಂದು ವೇದಿಕೆಯೊಂದಿಗೆ ಸಹಯೋಗ ಹೊಂದಿರುವ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಹಿರಿಯ ಲೇಖಕಿಯರು ಆಗ್ರಹಿಸಿದ್ದಾರೆ ಎಂದು ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ಗುಲಾಬಿ ಬಿಳಿಮಲೆ ತಿಳಿಸಿದ್ದಾರೆ.