ಉರ್ವ ಮಾರ್ಕೆಟ್ ಕಟ್ಟಡ ಭೇಟಿ

ಉರ್ವ ಮಾರ್ಕೆಟ್ ಕಟ್ಟಡ ಭೇಟಿ


ಮಂಗಳೂರು: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಉರ್ವ ನೂತನ ಮಾರುಕಟ್ಟೆ ಕಟ್ಟಡಕ್ಕೆ ಭೇಟಿ ನೀಡಿದರು.

ಮಾರುಕಟ್ಟೆ ಕಟ್ಟಡದ ಒಳಗೆ ಹೋದ ಸಚಿವರು ಅಂಗಡಿ ಕೋಣೆಗಳು, ಮೀನು-ಮಾಂಸ ಮಾರಾಟ ಕೇಂದ್ರಗಳನ್ನು ವೀಕ್ಷಿಸಿದರು. ಮಾರುಕಟ್ಟೆ ಕಟ್ಟಡದಲ್ಲಿ ಅತಿ ಶೀಘ್ರವೇ ಚಟುವಟಿಕೆಗಳನ್ನು ಪುನರಾರಂಭಿಸಬೇಕು. ಅಂಗಡಿ ಕೋಣೆಗಳನ್ನು ಮಳಿಗೆದಾರರಿಗೆ ಹಸ್ತಾಂತರಿಸಬೇಕು. ವರ್ತಕರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ನಗರಪಾಲಿಕೆ ಅಧಿಕಾರಿಗಳಿಗೆ ಅವರು ಸೂಚಿಸಿದರು. 

ಅಗತ್ಯವಿದ್ದರೆ  ಟೆಂಡರ್ ಶರತ್ತುಗಳನ್ನು ಸಡಿಲಗೊಳಿಸಬೇಕು. ತಾತ್ಕಾಲಿಕ ಮಾರುಕಟ್ಟೆಯಲ್ಲಿರುವ ಎಲ್ಲಾ ಮಳಿಗೆಗಳನ್ನು ನೂತನ ಮಾರುಕಟ್ಟೆಗೆ ಸ್ಥಳಾಂತರಿಸಬೇಕು ಎಂದು ಸೂಚಿಸಿದರು. 

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ, ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article