ಮೀನುಗಾರರು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ
Friday, October 24, 2025
ಮಂಗಳೂರು: ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನೆಯಂತೆ ಅ.23 ರಿಂದ 26 ರವರೆಗೆ ಅರಬ್ಬೀ ಸಮುದ್ರದಲ್ಲಿ ಮಳೆ ಮತ್ತು ಭಾರೀ ಗಾಳಿ ಬೀಸುವುದರಿಂದ ಪ್ರಕ್ಷುಬ್ದವಾಗಿರುತ್ತದೆ.
ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಯಾರೂ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.