ಕ್ಯಾಬ್ ಚಾಲಕನಿಗೆ ‘ಮುಸ್ಲಿಂ ಟೆರರಿಸ್ಟ್’ ಎಂದು ನಿಂದನೆ: ನಟ ಸೇರಿದಂತೆ ಮೂವರ ವಿರುದ್ಧ ಪ್ರಕರಣ

ಕ್ಯಾಬ್ ಚಾಲಕನಿಗೆ ‘ಮುಸ್ಲಿಂ ಟೆರರಿಸ್ಟ್’ ಎಂದು ನಿಂದನೆ: ನಟ ಸೇರಿದಂತೆ ಮೂವರ ವಿರುದ್ಧ ಪ್ರಕರಣ

ಮಂಗಳೂರು: ಕ್ಯಾಬ್ ಚಾಲಕನಿಗೆ ಕರೆ ಮಾಡಿ ‘ಮುಸ್ಲಿಂ ಟೆರರಿಸ್ಟ್’ ಎಂದು ಅವಹೇಳನ ಮಾಡಿದ ಬಗ್ಗೆ ಕೇರಳದ ಸಂತೋಷ್ ಅಬ್ರಾಹಂ, ಜಯಕೃಷ್ಣನ್ ಮತ್ತು ವಿಮಲ್ ವಿರುದ್ಧ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ನಗರಕ್ಕೆ ಗುರುವಾರ ರಾತ್ರಿ ಬಂದಿದ್ದ ಮೂವರು ಉಬರ್ ಮತ್ತು ರ‍್ಯಾಪಿಡೊ ಕ್ಯಾಪ್ಟನ್ ಆಪ್ ಮೂಲಕ ಕ್ಯಾಬ್ ಬುಕ್ ಮಾಡಿದ್ದರು. ವಾಹನ ಹತ್ತುವ ಸ್ಥಳವನ್ನು ಬಿಜೈ ನ್ಯೂ ರೋಡ್ ಎಂದು ನಮೂದಿಸಿದ್ದರು. ನಾನು ಆಪ್ ಮೂಲಕ ಕಾಲ್ ಮಾಡಿ ಪಿಕ್ ಆಪ್ ಬಗ್ಗೆ ವಿಚಾರಿಸಿದ್ದೆ. ಆಗ ಹಿಂದಿ ಭಾಷೆಯಲ್ಲಿ ಮಾತನಾಡಿದ ವ್ಯಕ್ತಿಯು ನನಗೆ ‘ಮುಸ್ಲಿಂ ಉಗ್ರವಾದಿ, ಟೆರರಿಸ್ಟ್’ ಎಂದು ಅಪಹಾಸ್ಯವಾಗಿ ಮಾತನಾಡಿದ್ದ. ಅಲ್ಲದೇ ಹಿಂದಿ ಹಾಗೂ ಮಲಯಾಳ ಭಾಷೆಯಲ್ಲಿ ನನ್ನ ತಾಯಿಗೆ ಅವಾಚ್ಯವಾಗಿ ಬೈದಿದ್ದ’ ಎಂದು ಆರೋಪಿಸಿ ಕ್ಯಾಬ್ ಚಾಲಕ ಅಹ್ಮದ್ ಶಫೀಕ್ ದೂರಿನಲ್ಲಿ ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 352 (ಸಾರ್ವಜನಿಕ ಶಾಂತಿ ಭಂಗಪಡಿಸುವ ಅಥವಾ ಅಪರಾಧ ಕೃತ್ಯಕ್ಕೆ ಪ್ರಚೋದಿಸಲು ಉದ್ದೇಶಪೂರ್ವಕವಾಗಿ ಅವಮಾನಿಸುವುದು) ಹಾಗೂ 353(2) (ಧರ್ಮ, ಜನಾಂಗ ಅಥವಾ ಜಾತಿ ಆಧಾರದ ಮೇಲೆ ಸುಳ್ಳು ಮಾಹಿತಿ, ವದಂತಿ ಅಥವಾ ಆತಂಕಕಾರಿ ಸುದ್ದಿ ಹರಡುವುದು) ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಆರೋಪಿಗಳಲ್ಲಿ ಜಯಕೃಷ್ಣನ್ ಮಾಲಯಾಳ ನಟ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article