ರಥಬೀದಿ ಕಾಲೇಜಿನ ವಿದ್ಯಾರ್ಥಿ ವೇದಿಕೆಗೆ ಪದಾಧಿಕಾರಿಗಳ ಆಯ್ಕೆ
Saturday, October 18, 2025
ಮಂಗಳೂರು: ಇಲ್ಲಿನ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2025-26ನೇ ಸಾಲಿನ ವಿದ್ಯಾರ್ಥಿ ವೇದಿಕೆಗೆ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು.
ಸ್ನಾತಕ ವಿದ್ಯಾರ್ಥಿ ವೇದಿಕೆಯ ಅಧ್ಯಕ್ಷರಾಗಿ ಅಂತಿಮ ಬಿಎ ವಿದ್ಯಾರ್ಥಿ ಸುನಿಲ್, ಕಾರ್ಯದರ್ಶಿಯಾಗಿ ಅಂತಿಮ ಬಿ.ಕಾಂ ವಿದ್ಯಾರ್ಥಿ ಸುಜನ್, ಉಪಾಧ್ಯಕ್ಷೆಯಾಗಿ ಅಂತಿಮ ಬಿ.ಎಸ್ಸಿ ವಿದ್ಯಾರ್ಥಿನಿ ಸೃಷ್ಟಿ, ಜತೆ ಕಾರ್ಯದರ್ಶಿಯಾಗಿ ಅಂತಿಮ ಬಿ.ಎಸ್.ಡಬ್ಲ್ಯೂ ಸಹನ ಆಯ್ಕೆಯಾದರು.
ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿ ವೇದಿಕೆ ಅಧ್ಯಕ್ಷರಾಗಿ ಅಂತಿಮ ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿ ಯುವರಾಜ್, ಮತ್ತು ಕಾರ್ಯದರ್ಶಿಯಾಗಿ ಅಂತಿಮ ಎಂ.ಎ. ವಿದ್ಯಾರ್ಥಿನಿ ಪ್ರತೀಕ್ಷಾ ಅವರು ಆಯ್ಕೆಯಾದರು.
ಎಲ್ಲಾ ತರಗತಿಗಳ ವಿದ್ಯಾರ್ಥಿ ಪ್ರತಿನಿಧಿಗಳು ಭಾಗವಹಿಸಿದ್ದು, ಆಯ್ಕೆ ಪ್ರಕ್ರಿಯೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯಕರ ಭಂಡಾರಿ ಎಂ. ಅವರ ನೇತೃತ್ವದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ದುಗ್ಗಪ್ಪ ಕಜೆಕಾರ್ ನಡೆಸಿಕೊಟ್ಟರು.
ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಎಲ್ಲಾ ಬೋಧಕ ಸದಸ್ಯರು ಉಪಸ್ಥಿತರಿದ್ದರು.