‘ಕಾಂತಾರ’ ವಿರುದ್ಧ ದೈವದ ಮೊರೆ ಹೋದ ದೈವಾರಾಧಕರು

‘ಕಾಂತಾರ’ ವಿರುದ್ಧ ದೈವದ ಮೊರೆ ಹೋದ ದೈವಾರಾಧಕರು

ಮಂಗಳೂರು: ‘ಕಾಂತಾರ ಚಾಪ್ಟರ್ 1’ ಚಿತ್ರದ ಬಗ್ಗೆ  ತುಳುನಾಡಿನ ಕೆಲ ದೈವಾರಾಧಕರು ಅಸಮಾಧಾನ ವ್ಯಕ್ತಪಡಿಸಿದ್ದು, ದೈವದ ಮೊರೆ ಹೋಗಿದ್ದಾರೆ.

ಮಂಗಳೂರಿನ ಬಜಪೆ ಸಮೀಪ ಪೆರಾರ ಬ್ರಹ್ಮ ಬಲವಂಡಿ, ಪಿಲಿಚಂಡಿ ದೈವಸ್ಥಾನದಲ್ಲಿ ದೈವನರ್ತಕರು ಹಾಗೂ ದೈವಾರಾಧಕರು ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ. ಕಾಂತಾರ ಚಾಪ್ಟರ್ 1 ಸಿನಿಮಾ ಹಾಗೂ ದೈವಾರಾಧನೆಯ ಅಪಹಾಸ್ಯದ ವಿರುದ್ಧ ದೈವಸ್ಥಾನದ ಮೆಟ್ಟಿಲೇರಿದ್ದಾರೆ. 

ಕಾಂತಾರ ಸಿನಿಮಾದಲ್ಲಿ ಪಂಜುರ್ಲಿ, ಗುಳಿಗ, ಪಿಲಿ ದೈವದ ಆವೇಶ ಸೇರಿದಂತೆ ದೈವ ನರ್ತನದ ಬಳಕೆ ಮಾಡಲಾಗಿತ್ತು. ಸಿನಿಮಾ ಬಿಡುಗಡೆ ಬೆನ್ನಲ್ಲೇ ಚಿತ್ರಮಂದಿರ ಸೇರಿದಂತೆ ಅನೇಕ ಕಡೆ ಹಲವರು ದೈವಾರಾಧನೆಯ ಅನುಕರಣೆ ಮಾಡಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧದ ಚರ್ಚೆಯೂ ಜೋರಾಗಿದೆ.

ಇನ್ನು ಕೆಲವರು ಮೈಮೇಲೆ ದೈವ ಬಂದ ರೀತಿಯಲ್ಲಿ ವಿಕೃತಿ ಮೆರೆದಿದ್ದರು. ಇದೆಲ್ಲವನ್ನು ಖಂಡಿಸಿ ದೈವಾರಾಧಕರು ಇಂದು ದೈವಕ್ಷೇತ್ರದಲ್ಲೇ ಕಾಂತಾರ ಸಿನಿಮಾ ಮತ್ತು ದೈವಾರಾಧನೆಯ ಅಪಹಾಸ್ಯ ಮಾಡುವವರ ವಿರುದ್ಧ ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ.

ನಿಮ್ಮ ಬೆನ್ನ ಹಿಂದೆ ಇದ್ದೇನೆ..

ಈ ಸಂದರ್ಭ ನುಡಿ ನೀಡಿದ ದೈವ  ‘ನನ್ನ ಹೆಸರಿನಲ್ಲಿ ಹಣ ಮಾಡುತ್ತಿರುವವರನ್ನು ನಾನು ನೋಡಿಕೊಳ್ಳುತ್ತೇನೆ. ಹಣವೆಲ್ಲ ಆಸ್ಪತ್ರೆ ಸೇರುವಂತೆ ಮಾಡುತ್ತೇನೆ. ಅಪಚಾರ ಮಾಡುವವರಿಗೆ ನಾನು ಬುದ್ದಿ ಕಲಿಸುತ್ತೇನೆ. ಇನ್ನು ಮುಂದೆ ಎಲ್ಲಾ ದೈವಸ್ಥಾನಗಳಲ್ಲಿ ಚಿತ್ರೀಕರಣ ನಿಲ್ಲಿಸಿ. ನೀವು ಹೋರಾಟವನ್ನು ಮುಂದುವರಿಸಿ. ನಾನು ನಿಮ್ಮ ಬೆನ್ನ ಹಿಂದೆ ಇದ್ದೇನೆ’ ಎಂದಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article