ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ಜಾಮೀನು ಅರ್ಜಿ ವಜಾ
Friday, October 10, 2025
ಮಂಗಳೂರು: ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆದಿದ್ದು ಈ ವೇಳೆ ನ್ಯಾಯಾಧೀಶರಾದ ಬಸವರಾಜ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಮಹೇಶ್ ಶೆಟ್ಟಿ ತಿಮರೋಡಿ ತಲೆಮರೆಸಿಕೊಂಡಿದ್ದು, ಪೊಲೀಸ್ ವಿಚಾರಣೆಗೆ ಹಾಜರಾಗಿಲ್ಲ.