ಹ್ಯಾಮರ್ ಥ್ರೋ: ಚಿನ್ನದ ಪದಕ ಗೆದ್ದ ನಿಶಾಲ್ ಡಿ’ಸೋಜಾ
Friday, October 10, 2025
ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜಿನ ದ್ವಿತೀಯ ವರ್ಷದ ಎಂಬಿಎ ವಿದ್ಯಾರ್ಥಿನಿ ನಿಶಾಲ್ ಡಾಲ್ಫಿನ ಡಿ’ಸೋಜಾ ಇತ್ತೀಚೆಗೆ ಉಡುಪಿಯಲ್ಲಿ ನಡೆದ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಹ್ಯಾಮರ್ ಥ್ರೋನಲ್ಲಿ ಬಂಗಾರದ ಪದಕ ಪಡೆದಿದ್ದಾರೆ.
ಅಲ್ಲದೇ, ಶಾರ್ಟ್ ಪುಟ್ ಎಸೆತದಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಇದೇ ತಿಂಗಳ 13 ರಿಂದ 16ರವರೆಗೆ ಹೈದರಾಬಾದ್‌ನಲ್ಲಿ ನಡೆಯುವ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುತ್ತಿದ್ದಾರೆ.
ಇವರ ಸಾಧನೆಗೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ, ಕ್ರೀಡಾ ವಿಭಾಗದ ಮುಖ್ಯಸ್ಥ ಡಾ. ಕೇಶವಮೂರ್ತಿ ಟಿ. ಹಾಗೂ ಕಾಲೇಜಿನ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.