
ಕರಾವಳಿಯಲ್ಲಿ ಸಾಧಾರಣ ಮಳೆ ಸಾಧ್ಯತೆ
ಮಂಗಳೂರು: ಕರಾವಳಿಯಲ್ಲಿ ಸೋಮವಾರ ಹೆಚ್ಚಿನ ಸಮಯ ಮೋಡಕವಿದ ವಾತಾವರಣ ಕಂಡುಬಂದಿತ್ತು, ಸಂಜೆ ವೇಳೆ ಮಂಗಳೂರು ನಗರ ಸಹಿತ ಹಲವಡೆ ಕೆಲವು ಹೊತ್ತು ಸಾಧಾರಣ ಮಳೆಯಾಗಿದೆ. ಮುಂದಿನ 4 ದಿನ ಕರಟವಳಿಯಾಧ್ಯಂತ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಭಾನುವಾರ ರಾತ್ರಿ ಕರಾವಳಿಯಾಧ್ಯಂತ ಮಳೆಯಾದರೆ ಸೋಮವಾರ ಬೆಳಗ್ಗೆ ಜಿಟಿಜಿಟಿ ಮಳೆ ಕಾಣಿಸಿತ್ತು. ನಂತರ ಇಡೀ ಮೋಡ ಆವರಿಸಿತ್ತು. ಗ್ರಾಮಾಂತರ ಪ್ರದೇಶದಲ್ಲಿ ಅಷ್ಟಾಗಿ ನಿರಂತರ ಮಳೆಯಾಗದಿದ್ದರೂ ಮಂಗಳೂರಿನಲ್ಲಿ ಮಧ್ಯಾಹ್ನ , ಸಂಜೆ ಕೆಲವು ಹೊತ್ತು ಮಳೆ ಸುರಿದಿದೆ. ದ.ಕ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗಿನ ಮಾಹಿತಿಯಂತೆ ಕಳೆದ 24 ಗಂಟೆಗಳಲ್ಲಿ 12.7 ಮಿಮಿ ಮಳೆ ದಾಖಲಾಗಿತು. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಅ.29ರ ತನಕ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಅ.23ರ ಸುಮಾರಿಗೆ ಚಂಡಮಾರುತವಾಗಿ ಪರಿವರ್ತನೆಗೊಂಡು ತಮಿಳುನಾಡು ಕರಾವಳಿ ಸಮೀಪ ತಲಪುವ ನಿರೀಕ್ಷೆ ಇದೆ. ಒಂದು ಲೆಕ್ಕಾಚಾರದಂತೆ ಭಾರತದ ಪೂರ್ವ ಕರಾವಳಿಯಲ್ಲಿ ಉತ್ತರಕ್ಕೆ ಚಲಿಸುವ ಸಾಧ್ಯತೆಗಳಿವೆ. ಈ ರೀತಿ ಆದರೆ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇನ್ನೊಂದು ವರದಿಯಂತೆ ತಮಿಳುನಾಡು ಕರಾವಳಿ ಮೂಲಕ ಭೂ ಪ್ರವೇಶಿಸಿ ಅ.26ರ ಸುಮಾರಿಗೆ ಅರಬ್ಬಿ ಸಮುದ್ರ ಸೇರುವ ನಿರೀಕ್ಷೆ ಇದೆ. ಈ ರೀತಿಯಾದ ರಾಜ್ಯದಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ.