ಮಂಗಳೂರಿನಿಂದ ದೆಹಲಿಗೆ ವಿಶೇಷ ರೈಲು
ಮಂಗಳೂರು: ದಕ್ಷಿಣ ರೈಲ್ವೆ ವಲಯವು ಇದೇ ಅ.೫ರಂದು ಮಂಗಳೂರು ಸೆಂಟ್ರಲ್‌ನಿಂದ ಹಾಸನ, ಯಶವಂತಪುರ, ಕಾಚಿಗುಡ ಮಾರ್ಗವಾಗಿ ಪ್ರಪ್ರಥಮವಾಗಿ ದೆಹಲಿಯ ಹಜ್ರತ್ ನಿಜಾಮುದ್ದೀನ್ ರೈಲು ನಿಲ್ದಾಣಕ್ಕೆ ವಿಶೇಷ ರೈಲು ಘೋಷಿಸಿದೆ.
ರೈಲು ಸಂಖ್ಯೆ 06008 ಮಂಗಳೂರು ಸೆಂಟ್ರಲ್ - ಹಜ್ರತ್ ನಿಜಾಮುದ್ದೀನ್ ವಿಶೇಷ ರೈಲು ಅ.5ರಂದು ಮಧ್ಯಾಹ್ನ 2.25ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಹಾಸನ ಮಾರ್ಗವಾಗಿ ರಾತ್ರಿ 11.30ಕ್ಕೆ ಯಶವಂತಪುರ ಜಂಕ್ಷನ್ ರೈಲು ನಿಲ್ದಾಣ ತಲುಪಲಿದೆ. ಅಲ್ಲಿಂದ ರಾತ್ರಿ 11.45ಕ್ಕೆ ಹೊರಡುವ ರೈಲು ಯಲಹಂಕ, ಹಿಂದುಪುರ, ಧರ್ಮಾವರಂ ಮಾರ್ಗವಾಗಿ ಮರುದಿನ ಅಂದರೆ ಅ.೬ರಂದು ಬೆಳಗ್ಗೆ 10.30ಕ್ಕೆ ಹೈದರಾಬಾದ್‌ನ ಕಾಚಿಗುಡ ರೈಲು ನಿಲ್ದಾಣ ತಲುಪಲಿದೆ. ಅಲ್ಲಿಂದ ಬೆಳಗ್ಗೆ 10.40ಕ್ಕೆ ಹೊರಡುವ ರೈಲು ಕಾಜಿಪೇಟೆ, ಬಲ್ಹಾರ್ಶಾ, ಜಾಂನ್ಸಿ ಮಾರ್ಗವಾಗಿ ದಿನಾಂಕ ಅ.7 ರಂದು ರಾತ್ರಿ 8 ಗಂಟೆಗೆ ಹಜ್ರತ್ ನಿಜಾಮುದ್ದೀನ್ ರೈಲು ನಿಲ್ದಾಣ ತಲುಪಲಿದೆ.
ಈ ರೈಲಿಗೆ ಮಂಗಳೂರು ಸೆಂಟ್ರಲ್ ಬಳಿಕ ಬಂಟ್ವಾಳ, ಕಬಕ, ಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ ಜಂಕ್ಷನ್, ಚನ್ನರಾಯಪಟ್ಟಣ, ಕುಣಿಗಲ್, ಯಶವಂತಪುರ ಜಂಕ್ಷನ್, ಯಲಹಂಕ ಜಂಕ್ಷನ್, ಹಿಂಡುಪುರ, ಧರ್ಮಾವರಂ ಜಂಕ್ಷನ್, ಅನಂತಪುರ, ಗೂಟಿ ಜಂಕ್ಷನ್, ಕುರ್ನೂಲ್ ಸಿಟಿ, ಮಹಬೂಬನಗರ್, ಕಾಚಿಗುಡ, ಕಾಜಿಪೇಟೆ ಜಂಕ್ಷನ್, ಬಲ್ಹಾರ್ಶಾ, ನಾಗಪುರ ಜಂಕ್ಷನ್, ಜುಹಾರ್ಪುರ, ಇಟಾರ್ಸಿ ಜಂಕ್ಷನ್, ಭೋಪಾಲ್ ಜಂಕ್ಷನ್, ಬಿನಾ ಜಂಕ್ಷನ್, ಜಾನ್ಸಿ ಜಂಕ್ಷನ್, ಗ್ವಾಲಿಯರ್ ಜಂಕ್ಷನ್, ಆಗ್ರಾ ಕಂಟೋನ್ಮೆಂಟ್, ಮಥುರಾ ಜಂಕ್ಷನ್, ಹಜ್ರತ್ ನಿಜಾಮುದ್ದೀನ್ ರೈಲು ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ.
ಈ ರೈಲು ದಕ್ಷಿಣ ರೈಲ್ವೆ ವಲಯವು ಮಂಗಳೂರಿನಿಂದ ಕರ್ನಾಟಕ ಹಾಗೂ ಉತ್ತರ ಭಾರತದ ಕಡೆಗೆ ಹಾಸನ ಮಾರ್ಗವಾಗಿ ಚಲಿಸುವ ಪ್ರಥಮ ರೈಲು ಕೂಡಾ ಆಗಿದೆ. ಹಬ್ಬಗಳು ಹಾಗೂ ವಾರಾಂತ್ಯದ ರಜೆ ಮುಗಿಸಿ ಬೆಂಗಳೂರು, ಹೈದರಾಬಾದ್, ದೆಹಲಿ ಸೇರಿದಂತೆ ಉತ್ತರ ಭಾರತದ ವಿವಿಧ ಭಾಗಗಳಿಗೆ ಸಂಚರಿಸುವವರು ಈ ವಿಶೇಷ ರೈಲಿನ ಮೂಲಕ ಪ್ರಯಾಣಿಸಬಹುದು.