ಸಾಹಿತ್ಯದಿಂದ ಸಮಾಜಕ್ಕೆ ದಿಕ್ಸೂಚಿ: ರಘುನಂದನ ಭಟ್ ನರೂರು
ಅಭಾಸಾಪ ದ.ಕ. ಜಿಲ್ಲಾ ಸಮಿತಿ ಮತ್ತು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇದರ ಮಂಗಳಗಂಗೆ ವಾರ್ಷಿಕ ಸಂಚಿಕೆ ವತಿಯಿಂದ ವಿ.ವಿ. ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ನಡೆದ ಸೃಜನೇತರ ಬರೆವಣಿಗೆ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ವಿ.ವಿ. ಕಾಲೇಜು ಪ್ರಾಂಶುಪಾಲ ಪ್ರೊ.ಗಣಪತಿ ಗೌಡ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಸೀಮಿತವಾಗದೆ ಸಾಹಿತ್ಯದ ಓದು ಹಾಗೂ ಬರವಣಿಗೆಯಲ್ಲಿ ಆಸಕ್ತಿ ವಹಿಸಬೇಕು ಎಂದರು.
ಅಭಾಸಾಪ ದ.ಕ. ಜಿಲ್ಲಾಧ್ಯಕ್ಷ ಪಿ.ಬಿ. ಹರೀಶ್ ರೈ, ವಿಭಾಗ ಸಂಯೋಜಕ ಸುಂದರ ಶೆಟ್ಟಿ ಇಳಂತಿಲ ಮುಖ್ಯ ಅತಿಥಿಗಳಾಗಿದ್ದರು. ಜತೆ ಕಾರ್ಯದರ್ಶಿ ಶ್ರೀಲಕ್ಷ್ಮಿ ಮಠದಮೂಲೆ, ಸಮಿತಿ ಸದಸ್ಯ ಡಾ.ಸುರೇಶ್ ನೆಗಳಗುಳಿ ಉಪಸ್ಥಿತರಿದ್ದರು.
ಕಾರ್ಯಾಗಾರದ ಅಂಗವಾಗಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ನುಡಿಚಿತ್ರ ಬರಹ ಸ್ಪರ್ಧೆಯಲ್ಲಿ ಪೂರ್ಣಿಮಾ ಕೆ.ಎಂ. (ಪ್ರಥಮ), ಪ್ರಿಯಾ (ದ್ವಿತೀಯ), ಮಹಮ್ಮದ್ ಶಹೀದ್ (ತೃತೀಯ), ಕಾವೇರಿ ಮತ್ತು ಮಾನ್ಯ ನಾಯಕ್ (ಪ್ರೋತ್ಸಾಹಕ) ಬಹುಮಾನ ಪಡೆದರು.
ಮಂಗಳಗಂಗೆ ಸಂಚಿಕೆಯ ಕಾರ್ಯನಿರ್ವಾಹಕ ಸಂಪಾದಕ ಡಾ. ಮಾಧವ ಎಂ.ಕೆ. ಸ್ವಾಗತಿಸಿ, ಅಭಾಸಾಪ ಜಿಲ್ಲಾ ಜತೆ ಕಾರ್ಯದರ್ಶಿ ಲತೇಶ್ ಬಾಕ್ರಬೈಲ್ ವಂದಿಸಿದರು. ಪ್ರಧಾನ ಕಾರ್ಯದರ್ಶಿ ವಿದುಷಿ ಸುಮಂಗಳಾ ರತ್ನಾಕರ್ ಕಾರ್ಯಕ್ರಮ ನಿರೂಪಿಸಿದರು.
ಎರಡು ದಿನದ ಕಾರ್ಯಾಗಾರದಲ್ಲಿ ಬೆಂಗಳೂರು ಉತ್ತರ ವಿ.ವಿ.ಯ ಕುಲಪತಿ ಪ್ರೊ. ನಿರಂಜನ ವಾನಳ್ಳಿ, ಹಿರಿಯ ಲೇಖಕ ಡಾ. ಚ.ನ. ಶಂಕರ ರಾವ್, ಪತ್ರಕರ್ತ ಆರ್.ಸಿ.ಭಟ್, ಉಪನ್ಯಾಸಕ ಗುರುಪ್ರಸಾದ್ ಟಿ.ಎನ್. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.