ಕರಾವಳಿಯಲ್ಲಿ ಸಂಜೆ ಸಾಧಾರಣ ಮಳೆ

ಕರಾವಳಿಯಲ್ಲಿ ಸಂಜೆ ಸಾಧಾರಣ ಮಳೆ

ಮಂಗಳೂರು: ಕರಾವಳಿಯಲ್ಲಿ ಮಂಗಳವಾರ ಹಲವಡೆ ಗುಡುಗು, ಮಿಂಚು ಸಹಿತ ಹಗುರದಿಂದ ಮಳೆಯಾಗಿದೆ. ದ.ಕ. ಜಿಲ್ಲೆಯಾದ್ಯಂತ ಇಡೀ ದಿನ ಬಿಸಿಲು ಸಹಿತ ಸಂಜೆ ಅಲ್ಲಲ್ಲಿ ಅಲ್ಪ ಮಳೆ ಸುರಿದಿದೆ. ಕೆಲವು ದಿನಗಳಿಂದ ಮಳೆ ದೂರವಾಗಿದ್ದು, ಈಗ ಮತ್ತೆ ಎಲ್ಲೆಡೆ ಮಳೆಯ ವಾತಾವರಣ ಕಂಡುಬಂದಿದೆ.

ದ.ಕ. ಜಿಲ್ಲೆಯ ಗ್ರಾಮಿಣ ಭಾಗದಲ್ಲಿ ಮಂಗಳವಾರ ನಸುಕಿನ ಜಾವದಿಂದಲೇ ಜಿಟಿಜಿಟಿ ಮಳೆ ಕಾಣಿಸಿತ್ತು. ಬೆಳಗ್ಗೆ ಸ್ವಲ್ಪ ಹೊತ್ತು ಮಳೆಗೆ ಬಿಡುವು ಹೊರತುಪಡಿಸಿದರೆ ಇಡೀ ದಿನ ಬಿಸಿಲೂ ಇತ್ತು. ಗ್ರಾಮಾಂತರ ಪ್ರದೇಶದಲ್ಲಿ ಅಷ್ಟಾಗಿ ನಿರಂತರ ಮಳೆಯಾಗದಿದ್ದರೂ ಮಂಗಳೂರಿನಲ್ಲಿ ಸಂಜೆ ವೇಳೆ ಅಬ್ಬರದ ಗುಡುಗು ಸಹಿತ ಕೆಲವು ಹೊತ್ತು ಮಳೆ ಸುರಿದಿದೆ. .ಕ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗಿನ ಮಾಹಿತಿಯಂತೆ ಕಳೆದ 24 ಗಂಟೆಗಳಲ್ಲಿ 4.1 ಮಿಮಿ ಮಳೆ ದಾಖಲಾಗಿತು.

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಸಾಧ್ಯತೆ:

ಹವಾಮಾನ ಇಲಾಖೆ ಮಾಹಿತಿಯಂತೆ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಸಾಧ್ಯತೆಗಳಿದ್ದು, ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ದಿನದಲ್ಲಿ 2, 3 ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಲಿದೆ. ಈಗಿನಂತೆ ಅ.19ರ ತನಕ ಈ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಒಂದಿಲ್ಲೊಂದು ಕಡೆ ಗುಡುಗು ಸಹಿತ ಹಿಂಗಾರು ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಅರಬ್ಬಿ ಸಮುದ್ರದ ಕಡೆಯಿಂದ ಶ್ರೀಲಂಕಾ, ತಮಿಳುನಾಡು ಮೂಲಕ ಗಾಳಿಯ ಪ್ರವೇಶದ ಜೊತೆಗೆ ಹಿಂಗಾರು ಮಾರುತಗಳು ಸೇರಿಕೊಂಡು ರಾಜ್ಯದಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ. ಅ.18,19ರ ಸಮಯದಲ್ಲಿ ಕೇರಳ ಕರಾವಳಿಯಲ್ಲಿ ಸಣ್ಣ ಪ್ರಮಾಣದ ಗಾಳಿಯ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಇದರಿಂದ ಹಿಂಗಾರು ಮತ್ತಷ್ಟು ಚುರುಕಾಗುವ ಲಕ್ಷಣಗಳಿವೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article