ವಿಶ್ವ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶದ ನಿಲುವನ್ನು ಪ್ರಸ್ತುತಪಡಿಸಿದ ಕ್ಯಾ. ಚೌಟ
ಭಾರತದಿಂದ ಸರ್ವ ಪಕ್ಷಗಳ ಸಂಸದರನ್ನು ಒಳಗೊಂಡಿರುವ ಪಿಪಿ ಚೌಧರಿ ನೇತೃತ್ವದ ನಿಯೋಗವು ನ್ಯೂಯಾರ್ಕ್ನಲ್ಲಿ ಅ.8ರಿಂದ 14ರವರೆಗೆ ನಡೆಯುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಅಧಿವೇಶನದಲ್ಲಿ ಭಾಗವಹಿಸುತ್ತಿದೆ. ಈ ತಂಡದಲ್ಲಿ ಕರ್ನಾಟಕದಿಂದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸ್ಥಾನ ಪಡೆದಿರುವುದು ಮಾತ್ರವಲ್ಲ ಈ ವಿಶ್ವ ವೇದಿಕೆಯಲ್ಲಿ ಭಾರತದ ಸುಸ್ಥಿರ ಅಭಿವೃದ್ಧಿ ಕುರಿತಂತೆ ವಿಚಾರ ಮಂಡಿಸುವ ಮೂಲಕ ಗಮನಸೆಳೆದಿದ್ದಾರೆ.
ಈ ಅಧಿವೇಶನದಲ್ಲಿಅವರು "2030ಕ್ಕೆ ಐದು ವರ್ಷಗಳು-ಸುಸ್ಥಿರ ಅಭಿವೃದ್ಧಿಗಾಗಿ ಬಹುಪಕ್ಷೀಯ ಪರಿಹಾರಗಳು "ವಿಷಯದ ಮೇಲೆ ಭವಿಷ್ಯ ಭಾರತದ ರಾಷ್ಟ್ರೀಯ ನಿಲುವನ್ನು ಮಂಡಿಸಿದ್ದಾರೆ. ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸಲು ಬಹುಪಕ್ಷೀಯ ಸಹಕಾರ ಮತ್ತು ಸಂಪನ್ಮೂಲಗಳ ಸ್ಥಿರತೆ ಅತ್ಯಗತ್ಯ. ಅಲ್ಲದೆ, ಭಾರತವು ಅಭಿವೃದ್ಧಿ ಹೊಂದದ(ಐಆಅs) ಮತ್ತು ಭೂ-ಆವೃತ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ತನ್ನ ಬೆಂಬಲ ನೀಡುವುದನ್ನು ಮುಂದುವರಿಸುವುದಾಗಿ ಮತ್ತು ಜಾಗತಿಕ ಸಹಭಾಗಿತ್ವಕ್ಕೆ ದಕ್ಷಿಣ-ದಕ್ಷಿಣ ಸಹಕಾರದ ಮಹತ್ವವನ್ನು ಭಾರತ ಪ್ರತಿಪಾದಿಸುತ್ತಿರುವುದಾಗಿ ಹೇಳಿದರು.