ಗ್ರಾಚ್ಯುಟಿಗಾಗಿ ಪ್ರೀಡಂ ಪಾರ್ಕ್‌ನಲ್ಲಿ ಮುಷ್ಕರ

ಗ್ರಾಚ್ಯುಟಿಗಾಗಿ ಪ್ರೀಡಂ ಪಾರ್ಕ್‌ನಲ್ಲಿ ಮುಷ್ಕರ

ಮಂಗಳೂರು: ನಿವೃತ್ತಿ ಹೊಂದಿದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ 2011-12ನೆ ಸಾಲಿನಿಂದ ಗ್ರಾಚ್ಯುಟಿ ನೀಡಬೇಕೆಂದು ಒತ್ತಾಯಿಸಿ ನ.6ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮುಷ್ಕರ ಆಯೋಜಿಸಲಾಗಿದೆ.

ಕರ್ನಾಟಕದಲ್ಲಿ ಸುಮಾರು 20,000ಕ್ಕೂ ಅಧಿಕ ಮಂದಿ ಈ ಗ್ರಾಚ್ಯುಟಿ ಹಣಕ್ಕಾಗಿ ಎದುರು ನೋಡುತ್ತಿದ್ದು, ದ.ಕ. ಜಿಲ್ಲೆಯಲ್ಲೂ ಸುಮಾರು 3000 ದಷ್ಟು ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು ಕಾಯುತ್ತಿದ್ದಾರೆ. ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಪ್ರಕಾರ ಗ್ರಾಚ್ಯುಟಿ ಹಣವನ್ನು ನಮಗೆ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಘದ ದ.ಕ. ಜಿಲ್ಲಾಧ್ಯಕ್ಷೆ ಜಯಲಕ್ಷ್ಮಿ ಬಿ.ಆರ್. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವ್ಯಾಪ್ತಿಯ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ 1975ರಿಂದ ಸೇವೆ ಮಾಡುತ್ತಾ ಬಂದಿದ್ದೇವೆ. 2023-24ರಲ್ಲಿ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕರಿಗೆ ಹಣ ನೀಡಲಾಗಿದೆ. ಆದರೆ 1975ರಿಂದ ಕೆಲಸ ಮಾಡಿದ ನಿವೃತ್ತರಿಗೆ ಗ್ರಾಜ್ಯುಟಿ ವೇತನ ನೀಡಿಲ್ಲ. ಈ ಬಗ್ಗೆ ಹಲವು ಹೋರಾಟಗಳು ನಡೆದಿವೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ನಮ್ಮ ಸಮಸ್ಯೆಯ ಬಗ್ಗೆ ಅರಿತುಕೊಂಡು ಅಂಗನವಾಡಿ ಸಂಘಟನೆಗ ಪದಾಧಿಕಾರಿಗಳನ್ನು ಒಳಗೊಂಡ ಸಭೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸಮಕ್ಷಮದಲ್ಲಿ ಚರ್ಚಿಸುವುದಾಗಿ ಭರವಸೆ ನೀಡಿದ್ದರು. ಆದರೆ ಕ್ರಮ ಆಗಿಲ್ಲ. ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಯುಕ್ತ ಸಂಘರ್ಷ ಸಮಿತಿ ಸಂಘಟನೆಗಳ ಪದಾಧಿಕಾರಿಗಳು ಇತ್ತೀಚೆಗೆ ಚರ್ಚಿಸಿ ನ. 6ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಜಿಲ್ಲೆಯಿಂದಲೂ ಸಂಘದ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

ಸುಳ್ಯ ತಾಲೂಕು ಸಂಚಾಲಕಿ ಜಯಂತಿ, ಮಂಗಳೂರು ತಾಲೂಕು ಸಂಚಾಲಕರಾದ ಉಷಾ ಸುರತ್ಕಲ್, ಗೀತಾ ಕೆ. ಹಳೆಯಂಗಡಿ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article