ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
Friday, October 17, 2025
ಮಂಗಳೂರು: 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಜಿಪಮೂಡ ಗ್ರಾಮದ ನಿವಾಸಿ ಫಾರೂಕ್ ಅಲಿಯಾಸ್ ಉಮ್ಮರ್ ಫಾರೂಕ್ (32) ಬಂಧಿತ ಆರೋಪಿಯಾಗಿದ್ದಾನೆ.ಈತನನ್ನು ಬಂಟ್ವಾಳ ತಾಲೂಕಿನ ಮಧ್ವ ಎಂಬಲ್ಲಿ ದಸ್ತಗಿರಿ ಮಾಡಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಈತನ ಮೇಲೆ ಉಪ್ಪಿನಂಗಡಿ, ಕಡಬ, ವಿಟ್ಲ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಕೋಣಾಜೆ, ಬರ್ಕೆ, ಬಜಪೆ ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ ಎಂದ ಪೊಲೀಸರು ತಿಳಿಸಿದ್ದಾರೆ.