ಅ.12 ರಂದು ಆಳ್ವಾಸ್ ಪದವಿಪೂರ್ವ ಶೈಕ್ಷಣಿಕ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ'
10ನೇ ತರಗತಿ (ಎಸ್ಸೆಸ್ಸೆಲ್ಸಿ)ಯಲ್ಲಿ ಸಿಬಿಎಸ್‌ಇ (ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ), ಐಸಿಎಸ್‌ಇ (ಭಾರತೀಯ ಪ್ರೌಢಶಿಕ್ಷಣದ ಪ್ರಮಾಣ ಪತ್ರ) ಹಾಗೂ ರಾಜ್ಯ ಪಠ್ಯಕ್ರಮ (ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ)ದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಈ ಶೈಕ್ಷಣಿಕ ವಿದ್ಯಾರ್ಥಿ ವೇತನ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ. ವಿದ್ಯಾರ್ಥಿಗಳ ಪ್ರವೇಶ ಪರೀಕ್ಷೆಯ ಅಂಕಗಳನ್ನು ಪರಿಗಣಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುವುದು. ವಿದ್ಯಾರ್ಥಿ ವೇತನಕ್ಕೆ ಅರ್ಹರಾದ ವಿದ್ಯಾರ್ಥಿಗಳು ಶ್ರೇಷ್ಠ ಗುಣಮಟ್ಟದ ಪದವಿಪೂರ್ವ ಶಿಕ್ಷಣವನ್ನು ಆಳ್ವಾಸ್ ಪದವಿ ಪೂರ್ವ ಕಾಲೇಜಿನಿಂದ ವಿಜ್ಞಾನ, ವಾಣಿಜ್ಯ ಅಥವಾ ಕಲಾ ವಿಷಯಗಳಲ್ಲಿ ಪಡೆಯಬಹುದು. ಗಣಿತ, ವಿಜ್ಞಾನ, ಇಂಗ್ಲೀಷ್ ಮತ್ತು ಸಮಾಜ ವಿಜ್ಞಾನ ವಿಷಯಗಳ 200 ಅಂಕದ, 60 ನಿಮಿಷಗಳ ಪರೀಕ್ಷೆಯು ಆಗಿರುತ್ತದೆ.
ವಿಶೇಷ ಸೂಚನೆ:
ಶೈಕ್ಷಣಿಕ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆಯ ಅಂಕದ ಆಧಾರದಲ್ಲಿ ಮತ್ತು ಪ್ರತಿ ವರ್ಷದಂತೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಅಂಕವನ್ನು ಪರಿಗಣಿಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆಯ ಮೇಲೂ ಆಯ್ಕೆಗಳು ನಡೆಯಲಿವೆ.
ಪರೀಕ್ಷೆಯ ದಿನ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ಪೋಷಕರ ಜೊತೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ.ಮೋಹನ ಆಳ್ವ ಸಮಾಲೋಚನೆ ನಡೆಸಲಿದ್ದಾರೆ.
ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ: 6366377823/ 6366377825, ವೆಬ್‌ಸೈಟ್ https://scholarship.alvas.org/puc/login.php
ಸಂಪರ್ಕಿಸಬಹುದು.