ಮೂಡುಬಿದಿರೆ ಬಂಟರ ಸಂಘದಿಂದ ರೂ.12 ಲಕ್ಷ ವಿದ್ಯಾಥಿ೯ ವೇತನ ವಿತರಣೆ
ಬಂಟರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಕಾಯ೯ಕ್ರಮ ಉದ್ಘಾಟಿಸಿ ಮಾತನಾಡಿ, ಜಾಗತಿಕ ಮಟ್ಟದಲ್ಲಿ ಬಂಟ ಸಮುದಾಯವನ್ನು ಗುರುತಿಸಿಕೊಳ್ಳಲು ಸಮೀಕ್ಷೆ ನಡೆಸಿ ನಮ್ಮವರ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವ ಎಲ್ಲಾ ವಿವರಗಳನ್ನು ಒಳಗೊಂಡ ವೆಬ್ಸೈಟ್ ನ್ನು ತಯಾರು ಮಾಡಲಾಗಿದ್ದು ಇದರ ಕೆಲಸ ಶೇ.90 ಮುಗಿದಿದೆ. ಅತೀ ಶೀಘ್ರದಲ್ಲಿ ಈ ಮೂಲಕ ಎಲ್ಲರನ್ನು ಒಗ್ಗೂಡಿಸುವ ಕಾಯ೯ವನ್ನು ಮಾಡಲಾಗುತ್ತಿದ್ದು ಇದಕ್ಕೆ ಎಲ್ಲರೂ ಸಹಕರಿಸಬೇಕೆಂದರು.
ಬೆಂಗಳೂರು ಸತ್ಯವಾಣಿ ಸಮೂಹ ವಿದ್ಯಾ ಸಂಸ್ಥೆಯ ಡಾ. ದೇವಿ ಪ್ರಸಾದ್ ಶೆಟ್ಟಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ವಿದ್ಯಾಥಿ೯ಗಳು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ವಿದ್ಯೆಯತ್ತ ಗಮನ ಹರಿಸುವಂತೆ ಸಲಹೆ ನೀಡಿದರು.
ಸನ್ಮಾನ: ಬಂಟರ ಮಹಿಳಾ ಘಟಕದ ಗೌರ ಅಧ್ಯಕ್ಷೆ ಜಯಶ್ರೀ ಅಮರನಾಥ ಶೆಟ್ಟಿ, ಅಂತರಾಷ್ಟ್ರೀಯ ಪವರ್ ಲಿಫ್ಟಿಂಗ್ ಚಾಂಪಿಯನ್ ಕಡಂದಲೆಯ ನಮಿ ರೈ, ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ವಿಭಾ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು.
ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಎಸ್ ಹೆಗ್ಡೆ, ಗೌರವಾಧ್ಯಕ್ಷೆ ಕಾಂತಿ ಲತಾ ಶೆಟ್ಟಿ, ಬಂಟರ ಸಂಘದ ಉಪಾಧ್ಯಕ್ಷ ಡಾ.ವಿನಯ ಕುಮಾರ್ ಹೆಗ್ಡೆ,ದಿನಕರ ಶೆಟ್ಟಿ, ದಿವಾಕರ ಶೆಟ್ಟಿ, ಜೊತೆ ಕಾಯ೯ದಶಿ೯ ಸುರೇಶ ಶೆಟ್ಟಿ, ಪ್ರೇಮನಾಥ ಮಾರ್ಲ ಉಪಸ್ಥಿತರಿದ್ದರು.
ಜತೆ ಕಾಯ೯ದಶಿ೯ ಕೆ. ಪಿ.ಸುಚರಿತ ಶೆಟ್ಟಿ ಸ್ವಾಗತಿಸಿದರು. ಕೋಶಾಧಿಕಾರಿ ಎಂ. ಪುರುಷೋತ್ತಮ ಶೆಟ್ಟಿ, ರಂಜಿತಾ ಶೆಟ್ಟಿ, ಹರಿಣಾಕ್ಷಿ ಶೆಟ್ಟಿ ಸನ್ಮಾನಿತರನ್ನು ಪರಿಚಯಿಸಿದರು.
ಶಿವ ಪ್ರಸಾದ್ ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿದರು. ವಕೀಲ ಚೇತನ್ ಕುಮಾರ್ ಶೆಟ್ಟಿ ವಂದಿಸಿದರು.

